Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರಿಂದ ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ನಾಯಕತ್ವ ಮತ್ತು ಬುದ್ಧಿವಂತಿಕೆಗಾಗಿ ಸ್ಮರಿಸಲಾಗುತ್ತದೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಶ್ರೀಮಂತ ಕೊಡುಗೆಯನ್ನು ಗುರುತಿಸಿ ಈ ವರ್ಷದ ಆರಂಭದಲ್ಲಿ ನಾವು ಅವರಿಗೆ ಭಾರತ ರತ್ನವನ್ನು ನೀಡಿದ್ದೇವೆ ಎಂಬುದು ನಮ್ಮ ಸರ್ಕಾರದ ಗೌರವವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ;

“ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ನಾಯಕತ್ವ ಮತ್ತು ಬುದ್ಧಿವಂತಿಕೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಶ್ರೀಮಂತ ಕೊಡುಗೆಯನ್ನು ಗುರುತಿಸಿ ಈ ವರ್ಷದ ಆರಂಭದಲ್ಲಿ ನಾವು ಅವರಿಗೆ ಭಾರತ ರತ್ನವನ್ನು ನೀಡಿದ್ದೇವೆ ಎಂಬುದು ನಮ್ಮ ಸರ್ಕಾರದ ಗೌರವವಾಗಿದೆ,” ಎಂದು ಹೇಳಿದರು.

 

 

*****