Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

 ಪ್ರಧಾನಮಂತ್ರಿ ಅವರಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪದಾನ ಮಾಡಿದರು 

 ಪ್ರಧಾನಮಂತ್ರಿ ಅವರಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪದಾನ ಮಾಡಿದರು 


25 ಜೂನ್ 2023 ರಂದು ಕೈರೋದ ಅರಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್‌ ನ ಅಧ್ಯಕ್ಷ ಘನತೆವೆತ್ತ  ಶ್ರೀ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ನೈಲ್’ ಪ್ರದಾನಿಸಿ ಗೌರವಿಸಿದರು.

ಈ ವಿಶೇಷ ಗೌರವಕ್ಕಾಗಿ ಅಧ್ಯಕ್ಷ ಶ್ರೀ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರಿಗೆ ಭಾರತದ ಜನತೆಯ ಪರವಾಗಿ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು.

ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಪ್ರಧಾನಮಂತ್ರಿ ಅವರಾಗಿದ್ದಾರೆ.

 
 ***