ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ದೂರವಾಣಿ ಕರೆ ಸ್ವೀಕರಿಸಿದ್ದು, ಸಾರ್ವತ್ರಿಕ ಚುನಾವಣೆ ಯಶಸ್ಸಿಗೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಆಯ್ಕೆಗೆ ಶುಭ ಕೋರಿದ್ದಾರೆ.
ಎಲ್ಲಾ ವಲಯಗಳಲ್ಲಿ ಭಾರತ – ರಷ್ಯಾ ವಿಶೇಷ ಮತ್ತು ಪ್ರತ್ಯೇಕ ತಾಂತ್ರಿಕ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಒಟ್ಟಾಗಿ ಕಾರ್ಯನಿರ್ವಹಿಸಲು ಉಭಯ ನಾಯಕರು ಒಪ್ಪಿದ್ದಾರೆ.
ಪ್ರಸ್ತುತ 2024 ರಲ್ಲಿ ಬ್ರಿಕ್ಸ್ ಅಧ್ಯಕ್ಷತೆಯನ್ನು ರಷ್ಯಾ ವಹಿಸಿದ್ದು, ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭ ಕೋರಿದರು.
ಉಭಯ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದರು.
*****