Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಮತ್ತು ಈಜಿಪ್ಟ್ ಅಧ್ಯಕ್ಷರ ನಡುವೆ ದೂರವಾಣಿ ಸಂಭಾಷಣೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಜಿಪ್ಟ್ ಅಧ್ಯಕ್ಷ ಘನತೆವೆತ್ತ ಶ್ರೀ ಅಬ್ದೆಲ್ ಫತ್ತಾ ಎಲ್ – ಸಿಸಿ ಅವರೊಂದಿಗಿಂದು ದೂರವಾಣಿ ಸಂಭಾಷಣೆ ನಡೆಸಿದರು.

ಇಬ್ಬರೂ ನಾಯಕರು ಕೋವಿಡ್ 19 ಸಾಂಕ್ರಾಮಿಕದಿಂದ ಉದ್ಭವಿಸಿರುವ ಜಾಗತಿಕ ಪರಿಸ್ಥಿತಿಯ ಕುರಿತಂತೆ ಚರ್ಚಿಸಿದರು ಮತ್ತು ತಮ್ಮ ತಮ್ಮ ಸರ್ಕಾರಗಳು ತಮ್ಮ ಜನರನ್ನು ರಕ್ಷಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಪರಸ್ಪರರು ಪಡೆದ ಅನುಭವಗಳ ನಿರಂತರ ವಿನಿಮಯ ಮತ್ತು ಉತ್ತಮ-ರೂಢಿಗಳ ಉಪಯುಕ್ತತೆಯನ್ನು ಒಪ್ಪಿಕೊಂಡರು.

ಈ ಕಷ್ಟದ ಕಾಲದಲ್ಲಿ ಔಷಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಎಲ್ಲ ಸಾಧ್ಯ ಬೆಂಬಲವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿಯವರು ಈಜಿಪ್ಟ್ ಅಧ್ಯಕ್ಷರಿಗೆ ಭರವಸೆ ನೀಡಿದರು. ಈಜಿಪ್ಟ್ ನಲ್ಲಿರುವ ಭಾರತೀಯ ನಾಗರಿಕರಿಗೆ ಬೆಂಬಲ ನೀಡುತ್ತಿರುವುದಕ್ಕಾಗಿ ಅವರು ಅಧ್ಯಕ್ಷ ಎಲ್-ಸಿಸಿ ಅವರಿಗೆ ಧನ್ಯವಾದ ಅರ್ಪಿಸಿದರು.

ತಮ್ಮ ತಂಡಗಳು ಪರಸ್ಪರ ಸಂಪರ್ಕದಲ್ಲಿದ್ದು, ಆಪ್ತ ಸಹಯೋಗ ಮತ್ತು ಅನುಭವ ವಿನಿಮಯ ಮಾಡಿಕೊಳ್ಳಲು ಇಬ್ಬರೂ ನಾಯಕರು ಸಮ್ಮತಿಸಿದರು.