Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೈಜಂಪ್ ನಲ್ಲಿ ಚಿನ್ನ ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ64ರಲ್ಲಿ ಚಿನ್ನದ ಪದಕವನ್ನು ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ. 

ಶ್ರೀ ಮೋದಿಯವರು ಪ್ರವೀಣ್ ಕುಮಾರ್ ಅವರ ದೃಢ ಸಂಕಲ್ಪ ಮತ್ತು ದೃಢತೆಯನ್ನು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿ:

“#Paralympics2024 ಪುರುಷರ ಹೈ ಜಂಪ್ ಟಿ 64ರಲ್ಲಿ ಚಿನ್ನ ಗೆದ್ದ ಪ್ರವೀಣ್ ಕುಮಾರ್ ಅವರಿಗೆ ಅಭಿನಂದನೆಗಳು!

ಅವರ ದೃಢ ನಿಶ್ಚಯ ಮತ್ತು ದೃಢತೆಯು ನಮ್ಮ ರಾಷ್ಟ್ರಕ್ಕೆ ಕೀರ್ತಿ ತಂದಿದೆ. 

ಭಾರತ ಅವರ ಬಗ್ಗೆ ಹೆಮ್ಮೆ ಪಡುತ್ತದೆ! ಎಂದು ಹೇಳಿದ್ದಾರೆ

#Cheer4Bharat” 

 

 

*****