Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ದೂರವಾಣಿ ಸಮಾಲೋಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಟ್ನಾಂ ಪ್ರಧಾನಮಂತ್ರಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚನೆ  ನಡೆಸಿದರು.

ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು  ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಉಭಯ ದೇಶಗಳು ಹಿಂದೂ ಮಹಾಸಾಗರ ಪ್ರದೇಶ ಆಧರಿತ ಮುಕ್ತ, ಎಲ್ಲವನ್ನೂ ಒಳಗೊಂಡ ಶಾಂತಿಯುತ ಮತ್ತು ನಿಯಮ ಆಧಾರಿತ ಸಮಾನ ದೃಷ್ಟಿಕೋನವನ್ನು ಹಂಚಿಕೊಳ್ಳುತ್ತವೆ ಮತ್ತು  ಆದರಿಂದ ಭಾರತ ವಿಯೆಟ್ನಾಂ ಸಮಗ್ರ ಕಾರ್ಯತಂತ್ರ ಸಹಭಾಗಿತ್ವದಿಂದಾಗಿ ಪ್ರಾದೇಶಿಕ ಸ್ಥಿರತೆ, ಸಂಮೃದ್ದಿ ಮತ್ತು ಅಭಿವೃದ್ಧಿಗೆ ಉತ್ತೇಜಿಸಲು ಸಹಾಯಕವಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು ಹಿನ್ನೆಲೆಯಲ್ಲಿ ಭಾರತ ಮತ್ತು ವಿಯೆಟ್ನಾಂ ಎರಡೂ ಸದ್ಯ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಹಸದಸ್ಯ ರಾಷ್ಟ್ರವಾಗಿವೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು.

ಭಾರತ ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದ ಸಮಯದಲ್ಲಿ ಮೌಲ್ಯಯುತ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿ ಚಿನ್ಹ್ ಅವರಿಗೆ ಮತ್ತು ವಿಯೆಟ್ನಾಂ ಜನತೆಗೆ ಧನ್ಯವಾದಗಳನ್ನು ಹೇಳಿದರು. ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ  ಪರಸ್ಪರ ಸಹಕಾರ ಮತ್ತು ಸಮಾಲೋಚನೆಗಳನ್ನು ಮುಂದುವರಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಕುರಿತು ಅವಲೋಕಿಸಿದರು ಮತ್ತು ನಾನಾ ವಲಯಗಳಲ್ಲಿ ಸಹಕಾರ ಕುರಿತು ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಂಡರು. 2022ನೇ ವರ್ಷ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಶುಭ ಮೈಲಿಗಲ್ಲನ್ನು ನಾನಾ ರೀತಿಯ ಸ್ಮರಣಾರ್ಥ ಕಾರ್ಯಕ್ರಮಗಳ ಮೂಲಕ ಸೂಕ್ತ ರೀತಿಯಲ್ಲಿ ಆಚರಿಸಲು ನಾಯಕರು  ಒಪ್ಪಿದರು.

ಆದಷ್ಟು ಶೀಘ್ರ ಸೂಕ್ತ ದಿನಾಂಕದಲ್ಲಿ ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳುವಂತೆ ಪ್ರಧಾನಿ  ಚಿನ್ಹ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಹ್ವಾನ ನೀಡಿದರು.

***