Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಿಯವರಿಂದ ತಮ್ಮ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸೌತ್ ಬ್ಲಾಕ್ ನ ಪ್ರಧಾನಮಂತ್ರಿ ಕಚೇರಿಯಲ್ಲಿ ತಮ್ಮ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಭೇಟಿ ಮಾಡಿ ಶುಭಾಶಯ ಹೇಳಿದರು.

ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಶ್ರೀ ನೃಪೇಂದ್ರ ಮಿಶ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಶ್ರೀ ಪಿ ಕೆ ಮಿಶ್ರಾ ಮತ್ತು ಕಾರ್ಯದರ್ಶಿ ಶ್ರೀ ಭಾಸ್ಕರ್ ಖುಲ್ಬೆ ಸೇರಿದಂತೆ ಪ್ರಧಾನಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿಗಳು ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಗಳಿಸಿದ ಅಭೂತಪೂರ್ವ ಗೆಲುವಿಗಾಗಿ ಪ್ರಧಾನಿಯವರನ್ನು ಅಭಿನಂದಿಸಿದರು.

ಕಳೆದ ಐದು ವರ್ಷಗಳಲ್ಲಿ ಇಡೀ ಪ್ರಧಾನಿ ಕಾರ್ಯಾಲಯದ ಪ್ರಯತ್ನಗಳು ಹಾಗೂ ಸಮರ್ಪಣೆಯಯನ್ನು ಶ್ಲಾಘಿಸಿದ ಪ್ರಧಾನಿಯವರು, ಭಾರತದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರತಿಯೊಬ್ಬರೂ ಇನ್ನೂ ಕಠಿಣ ಪರಿಶ್ರಮಪಡಬೇಕು ಎಂದು ಕೋರಿದರು.

ಜನತೆ ಸರ್ಕಾರದ ಬಗ್ಗೆ ಹೆಚ್ಚು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ನಿರೀಕ್ಷೆಗಳು ಪ್ರಧಾನಿ ಕಾರ್ಯಾಲಯದ ತಂಡಕ್ಕೆ ಹೆಚ್ಚು ಪರಿಶ್ರಮಪಡಲು ಶಕ್ತಿ ತುಂಬಿವೆ ಎಂದು ಅವರು ಹೇಳಿದರು.

ತಮ್ಮ ತಂಡದ ಪ್ರತಿಯೊಬ್ಬ ಸದಸ್ಯರ ಕೊಡುಗೆಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಕಳೆದ ಐದು ವರ್ಷಗಳು ನನಗೂ ಸಹ ಕಲಿಕೆಯ ಅನುಭವವಾಗಿತ್ತು ಎಂದರು.

ಪ್ರಧಾನಿ ಕಾರ್ಯಾಲಯದ ಸಿಬ್ಬಂದಿಯ ಕುಟುಂಬ ಸದಸ್ಯರಿಗೂ ಅವರು ತಮ್ಮ ಶುಭ ಕಾಮನೆಗಳನ್ನು ತಿಳಿಸಿದರು.