Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಿಯವರೊಂದಿಗೆ ಆಫ್ಘಾನಿಸ್ತಾನದ ಅಧ್ಯಕ್ಷ ಡಾ. ಮೊಹಮದ್ ಅಷರಫ್ ಘನಿ ಮಾತುಕತೆ, ಉರಿ ಭಯೋತ್ಪಾದಕ ದಾಳಿಗೆ ಖಂಡನೆ


ಆಫ್ಘಾನಿಸ್ತಾನದ ಅಧ್ಯಕ್ಷ ಶ್ರೀ ಅಷರಫ್ ಘನಿ ಅವರಿಂದು ದೂರವಾಣಿ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.

ಅಧ್ಯಕ್ಷ ಘನಿ ಅವರು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದ್ದಾರೆ ಮತ್ತು ಆಫ್ಘಾನಿಸ್ತಾನದ ಭಯೋತ್ಪಾದನೆಯ ಭೀತಿಯನ್ನು ನಿರ್ಮೂಲನೆ ಮಾಡಲು ಎಲ್ಲ ಕ್ರಮಗಳಿಗೆ ಭಾರತಕ್ಕೆ ಬೆಂಬಲ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.

ಹುತಾತ್ಮರಾದ ಯೋಧರ ಕುಟುಂಬದವರಿಗೆ ಅಧ್ಯಕ್ಷ ಘನಿ ಅವರು ಸಾಂತ್ವನ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಆಫ್ಘಾನಿಸ್ತಾನದ ಬೆಂಬಲಕ್ಕೆ ಅಧ್ಯಕ್ಷ ಘನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

AKT/AK