Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಈಜಿಪ್ಟ್ ಅಧ್ಯಕ್ಷ ಶ್ರೀ ಅಬ್ಡೆಲ್ ಫತ್ತಾಹ್ ಅಲ್-ಸಿಸಿ ನಡುವೆ ದೂರವಾಣಿ ಮಾತುಕತೆ


ಈಜಿಪ್ಟ್ ಅಧ್ಯಕ್ಷ ಶ್ರೀ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರೊಂದಿಗೆ ಇಂದು ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮತ್ತು ಅಧ್ಯಕ್ಷರಿಗೆ ಹಾಗೂ ಈಜಿಪ್ಟ್ ಜನತೆಗೆ ಈದ್-ಉಲ್-ಫಿತರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

ಶುಭಾಶಯಗಳಿಗೆ ಧನ್ಯವಾದ ತಿಳಿಸಿದ ಈಜಿಪ್ಟ್ ಅಧ್ಯಕ್ಷರು ಈಜಿಪ್ಟ್ ಮತ್ತು ಭಾರತವನ್ನು ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದೆಂದು ಉಲ್ಲೇಖಿಸಿದರು ಮತ್ತು ವೇಗವಾಗಿ ವಿಸ್ತರಿಸುತ್ತಿರುವ ದ್ವಿಪಕ್ಷೀಯ ಸಂಬಂಧದ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರು.

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಈಜಿಪ್ಟ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಈಜಿಪ್ಟ್ ಅಧಿಕಾರಿಗಳು ನೀಡಿದ ಬೆಂಬಲಕ್ಕೆ ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವರ್ಷ ಈಜಿಪ್ಟ್‌ಗೆ ಯೋಜಿಸಿದ್ದ ಭೇಟಿಯನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಿರುವ ಬಗ್ಗೆ ಉಲ್ಲೇಖಿಸಿದ ಪ್ರಧಾನಿಯವರು, ಪರಿಸ್ಥಿತಿ ತಿಳಿಯಾದ ಕೂಡಲೇ ಅಧ್ಯಕ್ಷ ಸಿಸಿಯವರನ್ನು ಭೇಟಿ ಮಾಡುವ ಇಚ್ಛೆಯನ್ನು ತಿಳಿಸಿದರು.