Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನ ಮಂತ್ರಿಯವರಿಗೆ “ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ನೈಜರ್” ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು

ಪ್ರಧಾನ ಮಂತ್ರಿಯವರಿಗೆ “ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ನೈಜರ್” ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು


ಸ್ಟೇಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ, ನೈಜೀರಿಯಾ ಫೆಡರಲ್ ರಿಪಬ್ಲಿಕ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಬೋಲಾ ಅಹ್ಮದ್ ಟಿನುಬು ಅವರು ಭಾರತ-ನೈಜೀರಿಯಾ ಸಂಬಂಧಗಳನ್ನು ಬೆಳೆಸುವಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ರಾಜನೀತಿ ಮತ್ತು ಅದ್ಭುತ ಕೊಡುಗೆಗಾಗಿ ಅವರಿಗೆ “ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ನೈಜರ್” ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಧಾನ ಮಂತ್ರಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಜಾಗತಿಕ ಶಕ್ತಿಕೇಂದ್ರವಾಗಿ ಸ್ಥಾನ ಪಡೆದಿದ್ದು, ಅವರ ಪರಿವರ್ತನಾತ್ಮಕ ಆಡಳಿತವು ಎಲ್ಲರಿಗೂ ಏಕತೆ, ಶಾಂತಿ ಮತ್ತು ಹಂಚಿಕೆಯ ಪ್ರವೃತ್ತಿಯನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಪ್ರಶಸ್ತಿಯ ಉಲ್ಲೇಖವು ಹೇಳುತ್ತದೆ.

ಪ್ರಶಸ್ತಿಯನ್ನು ಸ್ವೀಕರಿಸುತ್ತಾ ಪ್ರಧಾನಮಂತ್ರಿಯವರು, ಈ ಗೌರವವನ್ನು ಭಾರತದ ಜನತೆಗೆ ಮತ್ತು ಭಾರತ ಮತ್ತು ನೈಜೀರಿಯಾ ನಡುವಿನ ದೀರ್ಘಕಾಲದ, ಐತಿಹಾಸಿಕ ಸ್ನೇಹಕ್ಕೆ ಸಮರ್ಪಿಸಿದರು. ಈ ಮಾನ್ಯತೆಯು ಉಭಯ ದೇಶಗಳ ನಡುವಿನ ಕಾರ್ಯತಾಂತ್ರಿಕ ಪಾಲುದಾರಿಕೆ ಮತ್ತು ಜಾಗತಿಕ ದಕ್ಷಿಣದ ಆಕಾಂಕ್ಷೆಗಳಿಗೆ ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 1969ರ ನಂತರ ಈ ಪ್ರಶಸ್ತಿ ಪಡೆದ ಮೊದಲ ವಿದೇಶಿ ನಾಯಕರಾಗಿದ್ದಾರೆ.

 

*****