ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಳವಳ ಹಂಚಿಕೊಂಡರು.
ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಪ್ರಾಣಹಾನಿ ಬಗ್ಗೆ ಉಭಯ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದರು ಮತ್ತು ಪರಿಸ್ಥಿತಿಯನ್ನು ಶೀಘ್ರವಾಗಿ ಬಗೆಹರಿಸಲು ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು.
ಜಿ 20 ರ ಬ್ರೆಜಿಲ್ ಅಧ್ಯಕ್ಷತೆಯ ಯಶಸ್ಸಿಗೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ತಿಳಿಸಿದರು.
ಹೊಸದಿಲ್ಲಿಯಲ್ಲಿ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಅದರ ನೇಪಥ್ಯದಲ್ಲಿ ನಡೆದ ಸಭೆಯ ಹಿನ್ನೆಲೆಯಲ್ಲಿ ಆ ಬಳಿಕ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು.
*****
Had a good conversation on phone with President @LulaOficial. We are committed to deepen our strategic partnership. Shared our concerns on the situation in West Asia. Will continue to build on the successes of India’s G20 Presidency as Brazil takes over next month.
— Narendra Modi (@narendramodi) November 10, 2023