ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025ರ ಖಾರಿಫ್ ಋತುವಿಗೆ (01.04.2025 ರಿಂದ 30.09.2025 ರವರೆಗೆ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ (ಪಿ & ಕೆ) ರಸಗೊಬ್ಬರಗಳ ಮೇಲೆ ಪೋಷಕಾಂಶ ಆಧಾರಿತ ಸಬ್ಸಿಡಿ (ಎನ್ಬಿಎಸ್) ದರಗಳನ್ನು ನಿಗದಿಪಡಿಸುವ ರಸಗೊಬ್ಬರ ಇಲಾಖೆಯ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ.
2024ರ ಖಾರಿಫ್ ಋತುವಿಗೆ ಬಜೆಟ್ ಅವಶ್ಯಕತೆ ಸುಮಾರು 37,216.15 ಕೋಟಿ ರೂ. ಇದು 2024-25ರ ರಬಿ ಋತುವಿನ ಬಜೆಟ್ ಅಗತ್ಯಕ್ಕಿಂತ ಅಂದಾಜು 13,000 ಕೋಟಿ ರೂ.ಗಳಷ್ಟು ಹೆಚ್ಚು.
ಪ್ರಯೋಜನಗಳು:
• ರೈತರಿಗೆ ಸಬ್ಸಿಡಿ ದರದಲ್ಲಿ, ಕೈಗೆಟುಕುವ ಮತ್ತು ಸಮಂಜಸವಾದ ಬೆಲೆಯಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸುತ್ತದೆ.
• ರಸಗೊಬ್ಬರಗಳು ಮತ್ತು ಒಳಸುರಿಗಳ ಅಂತರರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪಿ &ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ತರ್ಕಬದ್ಧಗೊಳಿಸುತ್ತದೆ.
ಅನುಷ್ಠಾನ ಕಾರ್ಯತಂತ್ರ ಮತ್ತು ಗುರಿಗಳು:
ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಈ ರಸಗೊಬ್ಬರಗಳ ಸುಗಮ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಖಾರಿಫ್ 2025 ರ ಅನುಮೋದಿತ ದರಗಳ ಆಧಾರದ ಮೇಲೆ (01.04.2025 ರಿಂದ 30.09.2025 ರವರೆಗೆ ಅನ್ವಯಿಸುತ್ತದೆ) ಎನ್ಪಿಕೆಎಸ್ ದರ್ಜೆಗಳು/ಶ್ರೇಣಿಗಳು ಸೇರಿದಂತೆ ಪಿ &ಕೆ ರಸಗೊಬ್ಬರಗಳ ಮೇಲೆ ಸಬ್ಸಿಡಿಯನ್ನು ನೀಡಲಾಗುವುದು.
ಹಿನ್ನೆಲೆ:
ಸರ್ಕಾರವು ರಸಗೊಬ್ಬರ ತಯಾರಕರು / ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ 28 ದರ್ಜೆಯ ಪಿ & ಕೆ ರಸಗೊಬ್ಬರಗಳನ್ನು ಒದಗಿಸುತ್ತಿದೆ. ಪಿ & ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು 01.04.2010 ರಿಂದ ಎನ್ಬಿಎಸ್ ಯೋಜನೆಯಿಂದ ನಿಯಂತ್ರಿಸಲಾಗುತ್ತದೆ. ತನ್ನ ರೈತ ಸ್ನೇಹಿ ವಿಧಾನಕ್ಕೆ ಅನುಗುಣವಾಗಿ, ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಪಿ & ಕೆ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ. ರಸಗೊಬ್ಬರಗಳು ಮತ್ತು ಒಳಸುರಿಗಳಾದ ಯೂರಿಯಾ, ಡಿಎಪಿ, ಎಂಒಪಿ ಮತ್ತು ಗಂಧಕದ (ಸಲ್ಫರಿನ) ಅಂತಾರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳನ್ನು ಗಮನದಲ್ಲಿಟ್ಟುಕೊಂಡು, ಎನ್ ಪಿ ಕೆ ಎಸ್ ಶ್ರೇಣಿಗಳು ಸೇರಿದಂತೆ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ (ಪಿ & ಕೆ) ರಸಗೊಬ್ಬರಗಳ ಮೇಲೆ 01.04.25 ರಿಂದ 30.09.25 ರವರೆಗೆ ಜಾರಿಗೆ ಬರುವಂತೆ ಖಾರಿಫ್ 2025 ರ ಎನ್ ಬಿ ಎಸ್ ದರಗಳನ್ನು ಅನುಮೋದಿಸಲು ಸರ್ಕಾರ ನಿರ್ಧರಿಸಿದೆ. ಅನುಮೋದಿತ ಮತ್ತು ಅಧಿಸೂಚಿತ ದರಗಳ ಪ್ರಕಾರ ರಸಗೊಬ್ಬರ ಕಂಪನಿಗಳಿಗೆ ಸಬ್ಸಿಡಿ ನೀಡಲಾಗುವುದು, ಇದರಿಂದ ರಸಗೊಬ್ಬರಗಳು ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುತ್ತವೆ.
देशभर के किसान भाई-बहनों के हित में आज हमारी सरकार ने खरीफ सीजन-2025 के लिए फॉस्फेटिक और पोटाशिक फर्टिलाइजर पर पोषक तत्व आधारित सब्सिडी को मंजूरी दी है। इससे ना सिर्फ अन्नदाताओं को सस्ती दरों पर उर्वरक उपलब्ध होंगे, बल्कि खाद्य सुरक्षा भी सुनिश्चित होगी।https://t.co/7r1Bg8bxis
— Narendra Modi (@narendramodi) March 28, 2025