Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಫೆಬ್ರವರಿ 10 ರಂದು “ವಿಕಸಿತ ಭಾರತ ವಿಕಸಿತ ಗುಜರಾತ್”‌ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಫೆಬ್ರವರಿ 10 ರಂದು ಮಧ್ಯಾಹ್ನ 1 ಗಂಟೆಗೆ “ವಿಕಸಿತ ಭಾರತ್‌ ವಿಕಸಿತ ಗುಜರಾತ್‌” ಕಾರ್ಯಕ್ರಮ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್‌ ಮೂಲಕ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆವಾಜ್‌ ಯೋಜನೆ [ಪಿಎಂಎವೈ] ಮತ್ತು ಇತರೆ ವಸತಿ ಕಾರ್ಯಕ್ರಮಗಳಲ್ಲಿ ಗುಜರಾತ್‌ ನಲ್ಲಿ 1.3 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಧಾನಮಂತ್ರಿಯವರು ಭೂಮಿ ಪೂಜೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.  

ಗುಜರಾತ್‌ ನ ಎಲ್ಲಾ ಜಿಲ್ಲೆಗಳ 180 ಕ್ಕೂ ಅಧಿಕ ಪ್ರದೇಶಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನ ಸಮಾರಂಭ ಬನಸ್ಕಾಂಥಾ ಜಿಲ್ಲೆಯಲ್ಲಿ ನಡೆಯಲಿದೆ. ವಸತಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸಹಸ್ರಾರು ಫಲಾನುಭವಿಗಳು ರಾಜ್ಯ ವ್ಯಾಪಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಗುಜರಾತ್‌ ಮುಖ್ಯಮಂತ್ರಿ, ಗುಜರಾತ್‌ ಸರ್ಕಾರದ ಸಚಿವರು, ಸಂಸದರು, ಶಾಸಕರು ಮತ್ತು ಇತರೆ ಸ್ಥಳೀಯ ಹಂತದ ಜನ ಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.  

***