Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬೆಂಗಳೂರಿನ ವಿಧಾನಸೌಧದಲ್ಲಿ ಸಂತ ಕವಿ ಶ್ರೀ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ ಕವಿ ಶ್ರೀ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.

ಶ್ರೀ ಕನಕದಾಸರಿಗೆ ಗೌರವನಮನ ಸಲ್ಲಿಸಿದ ನಂತರ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ: “ಇಂದು ಕನಕದಾಸ ಜಯಂತಿಯ ಶುಭ ಸಂದರ್ಭದಲ್ಲಿ ನಾನು ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ನಮನ ಸಲ್ಲಿಸಿದ್ದೇನೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಅವರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ.”

ಪ್ರಧಾನಮಂತ್ರಿ, ಮಹರ್ಷಿ ವಾಲ್ಮೀಕಿಗೆ ಗೌರವನಮನ ಸಲ್ಲಿಸುವ ಕುರಿತು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು ಉಪಸ್ಥಿತರಿದ್ದರು.

******