ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಅವರ ಜೀವನವು ಜನರ ಕಲ್ಯಾಣಕ್ಕಾಗಿ ಮುಡಿಪಾಗಿತ್ತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಭಾರತ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಅವರ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಅದ್ಭುತ ಬೋಡೋ ಜನರ ಸಬಲೀಕರಣಕ್ಕಾಗಿ ಕೆಲಸ ಮಾಡಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪ್ರಧಾನ ಮಂತ್ರಿ ಹೇಳಿದರು.
ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು,
“ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಅವರ ಜೀವನವು ಜನರ ಕಲ್ಯಾಣಕ್ಕಾಗಿ ಮುಡಿಪಾಗಿತ್ತು. ಅವರ ಜನ್ಮದಿನದಂದು ಅವರನ್ನು ಸ್ಮರಿಸುತ್ತೇನೆ. ಭಾರತ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಅವರ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಅದ್ಭುತ ಬೋಡೋ ಜನರ ಸಬಲೀಕರಣಕ್ಕಾಗಿ ಕೆಲಸ ಮಾಡಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿವೆ,’’ ಎಂದು ಹೇಳಿದ್ದಾರೆ.
The life of Bodofa Upendranath Brahma was devoted to the welfare of people. Remembering him on his birth anniversary. The Government of India and Assam Government are making numerous efforts to realise his dreams and work for the empowerment of the wonderful Bodo people. https://t.co/ilZYtg5dIZ
— Narendra Modi (@narendramodi) March 31, 2023