Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಗೆ  ಜೂಡೋದಲ್ಲಿ ಕಂಚಿನ ಪದಕ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ


ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ 60 ಕೆಜಿ ಜೂಡೋ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ಕಪಿಲ್ ಪರ್ಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಕಪಿಲ್ ಪರ್ಮಾರ್ ಅವರ ಸಾಧನೆ ಸ್ಮರಣೀಯವಾಗಿದ್ದು, ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,

” ಕಪಿಲ್ ಪರ್ಮಾರ್  ಅವರದ್ದು ಅತ್ಯಂತ ಸ್ಮರಣೀಯವಾದ ಕ್ರೀಡಾ ಪ್ರದರ್ಶನವಾಗಿದ್ದು ವಿಶೇಷ ಪದಕ ಗಳಿಸಿದ್ದಾರೆ.!

ಕಪಿಲ್ ಪರ್ಮಾರ್ ಅವರಿಗೆ ಅಭಿನಂದನೆಗಳು, ಪ್ಯಾರಾಲಿಂಪಿಕ್ಸ್ ನಲ್ಲಿ ಜೂಡೋದಲ್ಲಿ ಪದಕ ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಪ್ಯಾರಾಲಿಂಪಿಕ್ಸ್ 2024ರ ಪುರುಷರ 60ಕೆಜಿ ಜೆ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು! ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಬರೆದಿದ್ದಾರೆ.

#Cheer4Bharat

 

 

*****