ಒಂದು ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಭಾರತದ ಈ ಐತಿಹಾಸಿಕ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದು, ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ಗಮನಾರ್ಹ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ.
ಈ ಸಾಧನೆಯನ್ನು “ಭಾರತಕ್ಕೆ ಹೆಮ್ಮೆಯ ಕ್ಷಣ” ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ, ಮತ್ತು ಈ ವಲಯಕ್ಕೆ ಸಂಬಂಧಿಸಿದವರ ಅವಿರತ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸಿದ್ದಾರೆ.
ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಶ್ರೀ ಜಿ ಕಿಶನ್ ರೆಡ್ಡಿ ಅವರು ತಮ್ಮ X ಪೋಸ್ಟ್ ನಲ್ಲಿ ಭಾರತವು 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ಅದ್ಭುತವಾಗಿ ದಾಟಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವರ X ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ತಮ್ಮ X ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“ಭಾರತಕ್ಕೆ ಇದು ಹೆಮ್ಮೆಯ ಕ್ಷಣ!
1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಸ್ಮರಣೀಯ ಮೈಲಿಗಲ್ಲನ್ನು ದಾಟಿರುವುದು ಗಮನಾರ್ಹ ಸಾಧನೆಯಾಗಿದ್ದು, ಇಂಧನ ಸುರಕ್ಷತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ನಮ್ಮ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಈ ಸಾಧನೆಯು ಈ ವಲಯದೊಂದಿಗೆ ಸಂಬಂಧ ಹೊಂದಿರುವ ಎಲ್ಲರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ.”
*****
A Proud Moment for India!
— Narendra Modi (@narendramodi) March 21, 2025
Crossing the monumental milestone of 1 Billion tonnes of coal production is a remarkable achievement, highlighting our commitment to energy security, economic growth and self-reliance. This feat also reflects the dedication and hardwork of all those… https://t.co/K8sHQssLHq