Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಮಾಜಿ ಕ್ರಿಕೆಟಿಗ ಶ್ರೀ ಯಶ್ಪಾಲ್ ಶರ್ಮಾ ಜಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಭಾರತದ ಮಾಜಿ ಕ್ರಿಕೆಟಿಗ ಮತ್ತು 1983 ವಿಶ್ವಕಪ್ ಕ್ರಿಕೆಟ್ ವಿಜೇತ ತಂಡದ ಸದಸ್ಯ ಶ್ರೀ ಯಶ್ಪಾಲ್ ಶರ್ಮಾ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರುಶ್ರೀ ಯಶ್ಪಾಲ್ ಶರ್ಮಾಜಿ ಅವರು ದಂತಕಥೆಯಾದ 1983 ತಂಡ ಒಳಗೊಂಡಂತೆ ಭಾರತ ಕ್ರಿಕೆಟ್ ತಂಡದ ಅತ್ಯಂತ ಪ್ರೀತಿಯ ಸದಸ್ಯರಾಗಿದ್ದರು. ಅವರು ತಂಡದ ಆಟಗಾರರು, ಅಭಿಮಾನಿಗಳು ಮತ್ತು ಉದಯೋನ್ಮುಖ ಕ್ರಿಕೆಟಿಗರಿಗೆ ಸ್ಫೂರ್ತಿಯಾಗಿದ್ದರು. ಅವರ ನಿಧನ ದುಃಖ ತಂದಿದ್ದು, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು, ಓಂ ಶಾಂತಿ.” ಎಂದು ಹೇಳಿದ್ದಾರೆ.

***