Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ 

ಭಾರತದ ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ 


ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಶ್ರೀ ಡಿ ವೈ ಚಂದ್ರಚೂಡ್ ಅವರ ನಿವಾಸದಲ್ಲಿ ನೆರವೇರಿದ ಗಣೇಶ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. 

ನಮ್ಮೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ಭಗವಂತ ದಯಪಾಲಿಸಲಿ ಎಂದು ಪ್ರಧಾನಮಂತ್ರಿಗಳು ಗಣೇಶನನ್ನು ಪ್ರಾರ್ಥಿಸಿದರು.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಅವರು;

“ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡೆನು.

ಸರ್ವ ವಿಘ್ನ ವಿನಾಯಕ ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಭಗವಂತನನ್ನು ಪ್ರಾರ್ಥಿಸಿಕೊಂಡೆನು’’ ಎಂದು ಹೇಳಿದ್ದಾರೆ.

 

 

*****