ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಅಭಿನಂದಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
” ಚಂದ್ರಯಾನ -3 ಯಶಸ್ಸಿನ ನಂತರ, ಭಾರತವು ತನ್ನ ಬಾಹ್ಯಾಕಾಶ ಪ್ರಯಾಣವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ,’’ ಎಂದು ಹೇಳಿದ್ದಾರೆ.
*****
After the success of Chandrayaan-3, India continues its space journey.
— Narendra Modi (@narendramodi) September 2, 2023
Congratulations to our scientists and engineers at @isro for the successful launch of India’s first Solar Mission, Aditya -L1.
Our tireless scientific efforts will continue in order to develop better…