Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಭಾರತದ ಸಂಗೀತ ಇತಿಹಾಸವು ವೈವಿಧ್ಯತೆಯ ಸ್ವರಮೇಳವಾಗಿದ್ದು, ಸಾವಿರಾರು ವರ್ಷಗಳಿಂದ ವಿಕಸನಗೊಂಡ ಲಯಗಳ ಮೂಲಕ ಪ್ರತಿಧ್ವನಿಸುತ್ತದೆ: ಪ್ರಧಾನ ಮಂತ್ರಿಗಳು


ಸಿಂಗಾಪುರದ ಉಪ ಪ್ರಧಾನ ಮಂತ್ರಿಗಳ ಸಿತಾರ್ ನುಡಿಸುವ ಅಭಿರುಚಿಯನ್ನು ಪ್ರಧಾನ ಮಂತ್ರಿಗಳು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರದ ಉಪ ಪ್ರಧಾನಿ ಶ್ರೀ ಲಾರೆನ್ಸ್ ವಾಂಗ್ ಅವರ ಸಿತಾರ್ ವಾದನದ ಸುಮಧುರ ಪ್ರಯತ್ನಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಶ್ರೀ ವಾಂಗ್ ಅವರ ಪೋಸ್ಟ್‌ಗೆ ಪ್ರತ್ಯುತ್ತರವಾಗಿ ಶ್ರೀ ಮೋದಿ ಪೋಸ್ಟ್ ಮಾಡಿದ್ದಾರೆ:

“ಸಿತಾರ್‌ ನುಡಿಸುವ ನಿಮ್ಮ ಉತ್ಸಾಹವು ಈ ಪ್ರಯತ್ನದಲ್ಲಿ ಇನ್ನಷ್ಟು ಬೆಳೆಯಲುಮತ್ತು ಇತರರಿಗೆ ಸ್ಫೂರ್ತಿ ನೀಡಲಿ. ಈ ಸುಮಧುರ ಪ್ರಯತ್ನಕ್ಕೆ ಅಭಿನಂದನೆಗಳು. ಭಾರತದ ಸಂಗೀತ ಇತಿಹಾಸವು ವೈವಿಧ್ಯತೆಯ ಸ್ವರಮೇಳವಾಗಿದೆ, ಸಾವಿರಾರು ವರ್ಷಗಳಿಂದ ವಿಕಸನಗೊಂಡ ಲಯಗಳ ಮೂಲಕ ಪ್ರತಿಧ್ವನಿಸುತ್ತದೆ,” ಎಂದು ಬಣ್ಣಿಸಿದ್ದಾರೆ

 

****