ಭಾರತವು ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ (2022 ನವೆಂಬರ್ 08ರಂದು) ಸಂಜೆ 4.30ಕ್ಕೆ ಜಿ20 ಅಧ್ಯಕ್ಷ ಗಾದಿಯ ಲೋಗೊ, ಥೀಮ್(ಘೋಷವಾಕ್ಯ) ಮತ್ತು ವೆಬ್‌ಸೈಟ್ ಅನ್ನು ವೀಡಿಯೊ ಕಾನ್ಫರೆನ್ಸಿಂಗ್ ನಲ್ಲಿ ಅನಾವರಣಗೊಳಿಸಲಿದ್ದಾರೆ.
ಪ್ರಧಾನಮಂತ್ರಿ ಅವರ ದೂರದೃಷ್ಟಿಯಿಂದ ಮಾರ್ಗದರ್ಶಿಸಲ್ಪಟ್ಟ ಭಾರತದ ವಿದೇಶಾಂಗ ನೀತಿಯು ಜಾಗತಿಕ ವೇದಿಕೆಯಲ್ಲಿ ನಾಯಕತ್ವದ ಪಾತ್ರಗಳನ್ನು ಕೈಗೊಳ್ಳಲು ವಿಕಸನಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಭಾರತವು 2022 ಡಿಸೆಂಬರ್ 01ರಂದು ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿದೆ. ಜಿ20 ಶೃಂಗಸಭೆಯ ಅಧ್ಯಕ್ಷ ಸ್ಥಾನವು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳ ಕುರಿತ ಜಾಗತಿಕ ಕಾರ್ಯಸೂಚಿಗೆ ಕೊಡುಗೆ ನೀಡಲು ಭಾರತಕ್ಕೆ ಒಂದು ಅನನ್ಯ ಅವಕಾಶ ನೀಡಲಿದೆ. ನಮ್ಮ ಜಿ20 ಅಧ್ಯಕ್ಷತೆಯ ಲೋಗೊ, ಥೀಮ್ ಮತ್ತು ವೆಬ್‌ಸೈಟ್, ಭಾರತದ ಸಂದೇಶ ಮತ್ತು ಜಗತ್ತಿಗೆ ಭಾರತದ ಆದ್ಯತೆಗಳನ್ನು ಸಾರಲಿದೆ.
ಜಿ20 ಶೃಂಗಸಭೆಯು ಅಂತಾರಾಷ್ಟ್ರೀಯ ಆರ್ಥಿಕ ಸಹಕಾರ ಏರ್ಪಡಿಸುವ ಪ್ರಧಾನ ವೇದಿಕೆಯಾಗಿದ್ದು, ಜಾಗತಿಕ ಜಿಡಿಪಿಯ 85%, ಜಾಗತಿಕ ವ್ಯಾಪಾರದ 75% ಮತ್ತು ವಿಶ್ವದ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಆರ್ಥಿಕ ಸಹಕಾರವನ್ನು ಪ್ರತಿನಿಧಿಸುತ್ತದೆ. ಜಿ20 ಅಧ್ಯಕ್ಷತೆಯ ಅವಧಿಯಲ್ಲಿ ಭಾರತವು, ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ 32 ವಲಯಗಳಿಗೆ ಅನ್ವಯವಾಗುವ ಸುಮಾರು 200 ಸಭೆಗಳನ್ನು ನಡೆಸಲಿದೆ. ಭಾರತವು ಆಯೋಜಿಸುತ್ತಿರುವ ಅತ್ಯುನ್ನತ ಅಂತಾರಾಷ್ಟ್ರೀಯ ಕೂಟಗಳಲ್ಲಿ ಜಿ20 ಶೃಂಗಸಭೆಯು ಒಂದಾಗಿದೆ.
*****