ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತೀಯ ಬಾಹ್ಯಾಕಾಶ ಸಂಘʼಕ್ಕೆ (ಐಎಸ್‌ಪಿಎ) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಂದಿಗೆ ಅವರು ಸಂವಾದ ನಡೆಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ದೇಶದ ಇಬ್ಬರು ಮಹಾನ್ ಪುತ್ರರಾದ ಭಾರತ ರತ್ನ ಜಯಪ್ರಕಾಶ್ ನಾರಾಯಣ್ ಮತ್ತು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮ ದಿನವೆಂಬ ವಿಷಯವನ್ನು ಗಮನಕ್ಕೆ ತಂದರು. ಸ್ವಾತಂತ್ರ್ಯೋತ್ತರ ಭಾರತಕ್ಕೆ ನಿರ್ದೇಶನ ನೀಡುವಲ್ಲಿ ಈ ಇಬ್ಬರು ಮಹಾನ್ ವ್ಯಕ್ತಿಗಳು ದೊಡ್ಡ ಪಾತ್ರ ವಹಿಸಿದರು. ಪ್ರತಿಯೊಬ್ಬರ ಪ್ರಯತ್ನಗಳೊಂದಿಗೆ ಎಲ್ಲರನ್ನೂ ಜೊತೆಗೆ ಕರೆದೊಯ್ಯುವ ಮೂಲಕ, ದೇಶದಲ್ಲಿ ಮಹತ್ವದ ಬದಲಾವಣೆಗಳನ್ನು ಹೇಗೆ ಸಾಕಾರಗೊಳಿಸಬಹುದು ಎಂಬುದನ್ನು ಅವರು ತೋರಿಸಿದರು. ಅವರ ಜೀವನ ತತ್ವವು ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.
ಭಾರತದಲ್ಲಿ ಇಂದಿನ ರೀತಿಯ ನಿರ್ಣಾಯಕ ಸರಕಾರ ಹಿಂದೆಂದೂ ಇರಲಿಲ್ಲ ಎಂದು ಪ್ರಧಾನಿ ಒತ್ತಿ ಹೇಳಿದರು. ಬಾಹ್ಯಾಕಾಶ ವಲಯ ಮತ್ತು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಇಂದು ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಸುಧಾರಣೆಗಳು ಇದಕ್ಕೆ ಉದಾಹರಣೆಯಾಗಿವೆ ಎಂದರು. ಭಾರತೀಯ ಬಾಹ್ಯಾಕಾಶ ಸಂಘ (ಐಎಸ್ ಪಿಎ) ರಚನೆಗಾಗಿ ಹಾಜರಿದ್ದ ಎಲ್ಲರನ್ನೂ ಅವರು ಅಭಿನಂದಿಸಿದರು.
ಬಾಹ್ಯಾಕಾಶ ಸುಧಾರಣೆಗಾಗಿ ಸರಕಾರದ ಕಾರ್ಯವಿಧಾನವು ವಿಧಾನವು 4 ಸ್ತಂಭಗಳನ್ನು ಆಧರಿಸಿದೆ ಎಂದು ಪ್ರಧಾನಿ ಹೇಳಿದರು. ಮೊದಲನೆಯದಾಗಿ, ಖಾಸಗಿ ವಲಯಕ್ಕೆ ಆವಿಷ್ಕಾರದ ಸ್ವಾತಂತ್ರ್ಯ. ಎರಡನೆಯದಾಗಿ, ಸಕ್ರಿಯಗೊಳಿಸುವಿಕೆಯಲ್ಲಿ ಸರಕಾರದ ಪಾತ್ರ. ಮೂರನೆಯದಾಗಿ, ಭವಿಷ್ಯಕ್ಕಾಗಿ ಯುವಕರನ್ನು ಸಿದ್ಧಗೊಳಿಸುವುದು. ಮತ್ತು ನಾಲ್ಕನೆಯದಾಗಿ, ಬಾಹ್ಯಾಕಾಶ ವಲಯವನ್ನು ಸಾಮಾನ್ಯ ಜನರ ಪ್ರಗತಿಗೆ ಸಂಪನ್ಮೂಲವಾಗಿ ನೋಡುವುದು. 130 ಕೋಟಿ ದೇಶವಾಸಿಗಳ ಪ್ರಗತಿಗೆ ಬಾಹ್ಯಾಕಾಶ ಕ್ಷೇತ್ರ ಪ್ರಮುಖ ಮಾಧ್ಯಮವಾಗಿದೆ ಎಂದು ಪ್ರಧಾನಿ ಹೇಳಿದರು. ಭಾರತದ ಪಾಲಿಗೆ ಬಾಹ್ಯಾಕಾಶ ವಲಯ ಎಂದರೆ ಸಾಮಾನ್ಯ ಜನರಿಗೆ ಉತ್ತಮ ನಕ್ಷೆ, ಇಮೇಜಿಂಗ್ ಮತ್ತು ಸಂಪರ್ಕ ಸೌಲಭ್ಯಗಳು ಎಂದು ಅವರು ಹೇಳಿದರು. ಅಲ್ಲದೆ, ಉದ್ಯಮಿಗಳ ಪಾಲಿಗೆ ಬಾಹ್ಯಾಕಾಶ ವಲಯ ಎಂದರೆ ಸಾಗಣೆಯಿಂದ ವಿತರಣೆವರೆಗೆ ಉತ್ತಮ ವೇಗ ಎಂದರ್ಥ. ಮೀನುಗಾರರಿಗೆ ಉತ್ತಮ ಸುರಕ್ಷತೆ ಮತ್ತು ಆದಾಯ, ನೈಸರ್ಗಿಕ ವಿಪತ್ತುಗಳ ಉತ್ತಮ ಮುನ್ಸೂಚನೆ ಪ್ರಯೋಜನವೂ ಇದರಿಂದ ದೊರೆಯಲಿದೆ ಎಂದು ಅವರು ಹೇಳಿದರು.
ʻಆತ್ಮನಿರ್ಭರ ಭಾರತʼ ಅಭಿಯಾನವು ಕೇವಲ ದೂರದೃಷ್ಟಿಯನ್ನು ಮಾತ್ರ ಹೊಂದಿಲ್ಲ, ಅದೊಂದು ಉತ್ತಮ ಚಿಂತನೆಯ, ಯೋಜಿತ, ಸಮಗ್ರ ಆರ್ಥಿಕ ಕಾರ್ಯತಂತ್ರವಾಗಿದೆ ಎಂದು ಪ್ರಧಾನಿ ಹೇಳಿದರು. ಭಾರತದ ಉದ್ಯಮಿಗಳು ಮತ್ತು ಭಾರತದ ಯುವಕರ ಕೌಶಲ್ಯ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಭಾರತವನ್ನು ಜಾಗತಿಕ ಉತ್ಪಾದನಾ ಶಕ್ತಿಕೇಂದ್ರವನ್ನಾಗಿ ಮಾಡುವ ಕಾರ್ಯತಂತ್ರ ಅದಾಗಿದೆ. ಭಾರತದ ತಾಂತ್ರಿಕ ಪರಿಣತಿಯ ಆಧಾರದ ಮೇಲೆ ಭಾರತವನ್ನು ಆವಿಷ್ಕಾರಗಳ ಜಾಗತಿಕ ಕೇಂದ್ರವನ್ನಾಗಿ ಮಾಡುವ ಕಾರ್ಯತಂತ್ರವೂ ಹೌದು. ಜಾಗತಿಕ ಅಭಿವೃದ್ಧಿಯಲ್ಲಿ ದೊಡ್ಡ ಪಾತ್ರ ವಹಿಸುವ ಕಾರ್ಯತಂತ್ರ ಇದಾಗಿದ್ದು, ಜಾಗತಿಕವಾಗಿ ಭಾರತದ ಮಾನವ ಸಂಪನ್ಮೂಲ ಮತ್ತು ಪ್ರತಿಭೆಯ ಘನತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.
ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಂಬಂಧಿಸಿದಂತೆ ಸರಕಾರ ಸ್ಪಷ್ಟ ನೀತಿಯೊಂದಿಗೆ ಮುನ್ನಡೆಯುತ್ತಿದೆ ಮತ್ತು ಸರಕಾರದ ಪಾತ್ರ ಅಗತ್ಯವಿಲ್ಲದ ಈ ವಲಯಗಳಲ್ಲಿನ ಬಹುತೇಕ ಉದ್ಯಮಗಳನ್ನು ಖಾಸಗಿಗೆ ಮುಕ್ತಗೊಳಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಏರ್ ಇಂಡಿಯಾಗೆ ಸಂಬಂಧಿಸಿದ ನಿರ್ಧಾರವು ನಮ್ಮ ಬದ್ಧತೆ ಮತ್ತು ಗಂಭೀರತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.
ಕಳೆದ 7 ವರ್ಷಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಅಂಚಿನಲ್ಲಿರುವ ಜನರನ್ನು ತಲುಪಲು ಮತ್ತು ಸೋರಿಕೆ ಮುಕ್ತ, ಪಾರದರ್ಶಕ ಆಡಳಿತದ ಸಾಧನವಾಗಿ ಪರಿವರ್ತಿಸಲಾಗಿದೆ ಎಂದು ಪ್ರಧಾನಿ ಬಣ್ಣಿಸಿದರು. ಬಡವರ ವಸತಿ ಯೋಜನೆ ಘಟಕಗಳು, ರಸ್ತೆಗಳು ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಜಿಯೋಟ್ಯಾಗ್ ಬಳಸಿದ ಉದಾಹರಣೆಗಳನ್ನು ಅವರು ನೀಡಿದರು. ಅಭಿವೃದ್ಧಿ ಯೋಜನೆಗಳನ್ನು ಉಪಗ್ರಹ ಇಮೇಜಿಂಗ್ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಫಸಲ್ ಬಿಮಾ ಯೋಜನೆ ಕ್ಲೇಮುಗಳ ಇತ್ಯರ್ಥದಲ್ಲಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ʻನಾವಿಕ್ʼ(ಎನ್ಎವಿಐಸಿ) ವ್ಯವಸ್ಥೆಯು ಮೀನುಗಾರರಿಗೆ ಸಹಾಯಕವಾಗಿದೆ, ವಿಪತ್ತು ನಿರ್ವಹಣಾ ಯೋಜನೆ ರೂಪಿಸಲೂ ಸಹ ಈ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ತಂತ್ರಜ್ಞಾನವನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಮಹತ್ವವನ್ನು ಪ್ರಧಾನಿ ಒತ್ತಿ ಹೇಳಿದರು. ಡಿಜಿಟಲ್ ತಂತ್ರಜ್ಞಾನದ ಉದಾಹರಣೆ ನೀಡಿದ ಅವರು, ಭಾರತವು ಇಂದು ಅಗ್ರಗಣ್ಯ ಡಿಜಿಟಲ್ ಆರ್ಥಿಕತೆಗಳಲ್ಲಿ ಒಂದಾಗಿದೆ. ಏಕೆಂದರೆ ನಾವು ಡೇಟಾದ ಶಕ್ತಿಯನ್ನು ಕಡು ಬಡವರಿಗೆ ಲಭ್ಯವಾಗುವಂತೆ ಮಾಡಬಹುದು ಎಂದು ಹೇಳಿದರು.
ಯುವ ಉದ್ಯಮಿಗಳು ಮತ್ತು ನವೋದ್ಯಮಗಳ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಸರಕಾರವು ಪ್ರತಿಯೊಂದು ಹಂತದಲ್ಲೂ ಉದ್ಯಮ, ಯುವ ನವೋದ್ಯಮಿಗಳು ಮತ್ತು ನವೋದ್ಯಮಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು. ಬಲವಾದ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು, ವೇದಿಕೆ ವಿಧಾನವು ಬಹಳ ಮುಖ್ಯ ಎಂದು ಅವರು ವಿವರಿಸಿದರು. ವೇದಿಕೆ ವ್ಯವಸ್ಥೆಯನ್ನು ವ್ಯಾಖ್ಯಾನಿಸಿದ ಅವರು “ಈ ವಿಧಾನದಲ್ಲಿ ಸರಕಾರವು ಮುಕ್ತ ಪ್ರವೇಶ ಹೊಂದಿರುವ ಸಾರ್ವಜನಿಕ ನಿಯಂತ್ರಿತ ವೇದಿಕೆಗಳನ್ನು ರಚಿಸಿ, ಅವುಗಳು ಉದ್ಯಮ ಮತ್ತು ಸಂಸ್ಥೆಗಳಿಗೆ ಲಭ್ಯವಾಗುವಂತೆ ಮಾಡುತ್ತದೆ. ಉದ್ಯಮಿಗಳು ಈ ಮೂಲ ವೇದಿಕೆಯಲ್ಲಿ ಹೊಸ ಪರಿಹಾರಗಳನ್ನು ತಯಾರಿಸುತ್ತಾರೆ,” ಎಂದರು. ಬಲವಾದ ಹಣಕಾಸು-ತಂತ್ರಜ್ಞಾನ (ಫಿನ್‌ಟೆಕ್) ಜಾಲದ ಆಧಾರವಾದ ʻಯುಪಿಐʼ ವೇದಿಕೆಯ ಉದಾಹರಣೆಯೊಂದಿಗೆ ಪ್ರಧಾನಿ ಇದನ್ನು ವಿವರಿಸಿದರು. ಬಾಹ್ಯಾಕಾಶ, ಭೂಪ್ರದೇಶ ಮತ್ತು ವಿವಿಧ ಪ್ರದೇಶಗಳಲ್ಲಿ ಡ್ರೋನ್‌ಗಳ ಬಳಕೆಗಾಗಿ ಇದೇ ರೀತಿಯ ವೇದಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಇಂದಿನ ಸಭೆಯ ಸಲಹೆಗಳ ಮೂಲಕ ಮತ್ತು ಮಧ್ಯಸ್ಥಗಾರರ ಸಕ್ರಿಯ ಪಾಲ್ಗೊಳ್ಳುವಿಕೆಯ ಮೂಲಕ ಶೀಘ್ರದಲ್ಲೇ ಉತ್ತಮ ʻಬಾಹ್ಯಾಕಾಶ-ದೂರಸಂಪರ್ಕ (ಸ್ಪೇಸ್‌ಕಾಮ್) ನೀತಿʼ ಮತ್ತು ʻದೂರ ಸಂವೇದಿ ನೀತಿʼ ಹೊರಹೊಮ್ಮಲಿವೆ ಎಂಬ ವಿಶ್ವಾಸವನ್ನು ಪ್ರಧಾನಿ ವ್ಯಕ್ತಪಡಿಸಿದರು.
20ನೇ ಶತಮಾನದಲ್ಲಿ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ವಲಯವನ್ನು ಆಳಲು ಪ್ರಯತ್ನಿಸಿದ ಪ್ರವೃತ್ತಿಯು ವಿಶ್ವದ ದೇಶಗಳನ್ನು ಹೇಗೆ ವಿಭಜಿಸಿತು ಎಂಬುದನ್ನು ಪ್ರಧಾನಿ ಗಮನಕ್ಕೆ ತಂದರು. ಈಗಿನ 21ನೇ ಶತಮಾನದಲ್ಲಿ, ಜಗತ್ತನ್ನು ಒಗ್ಗೂಡಿಸುವಲ್ಲಿ ಮತ್ತು ಸಂಪರ್ಕಿಸುವಲ್ಲಿ ಬಾಹ್ಯಾಕಾಶವು ಪ್ರಮುಖ ಪಾತ್ರ ವಹಿಸುವಂತೆ ಭಾರತವು ನೋಡಿಕೊಳ್ಳಬೇಕು ಎಂದು ಹೇಳಿ ಪ್ರಧಾನಿಯವರು ಮಾತು ಮುಗಿಸಿದರು.
*****
Speaking at the launch of Indian Space Association. https://t.co/PWnwsL54Z8
— Narendra Modi (@narendramodi) October 11, 2021
आज देश के दो महान सपूतों, भारत रत्न जय प्रकाश नारायण जी और भारत रत्न नानाजी देशमुख की जन्म जयंती भी है।
— PMO India (@PMOIndia) October 11, 2021
आजादी के बाद के भारत को दिशा देने में इन दोनों महान व्यक्तित्वों की बहुत बड़ी भूमिका रही है: PM @narendramodi
सबको साथ लेकर, सबके प्रयास से, राष्ट्र में कैसे बड़े-बड़े परिवर्तन आते हैं, इनका जीवन दर्शन हमें आज भी इसकी प्रेरणा देता है।
— PMO India (@PMOIndia) October 11, 2021
मैं जय प्रकाश नारायण जी और नानाजी देशमुख जी को नमन करता हूं, अपनी श्रद्धांजलि देता हूं: PM @narendramodi
आज जितनी निर्णायक सरकार भारत में है, उतनी पहले कभी नहीं रही।
— PMO India (@PMOIndia) October 11, 2021
Space Sector और Space Tech को लेकर आज भारत में जो बड़े Reforms हो रहे हैं, वो इसी की एक कड़ी है।
मैं इंडियन स्पेस एसोसिएशन – इस्पा के गठन के लिए आप सभी को एक बार फिर बधाई देता हूं, अपनी शुभकामनाएं देता हूं: PM
जब हम स्पेस रिफ़ॉर्म्स की बात करते हैं, तो हमारी अप्रोच 4 pillars पर आधारित है।
— PMO India (@PMOIndia) October 11, 2021
पहला, प्राइवेट सेक्टर को innovation की आज़ादी
दूसरा, सरकार की enabler के रूप में भूमिका: PM @narendramodi
तीसरा, भविष्य के लिए युवाओं को तैयार करना
— PMO India (@PMOIndia) October 11, 2021
और चौथा, Space सेक्टर को सामान्य मानवी की प्रगति के संसाधन के रूप में देखना: PM @narendramodi
हमारा स्पेस सेक्टर, 130 करोड़ देशवासियों की प्रगति का एक बड़ा माध्यम है।
— PMO India (@PMOIndia) October 11, 2021
हमारे लिए स्पेस सेक्टर यानी, सामान्य मानवी के लिए बेहतर मैपिंग, इमेजिंग और connectivity की सुविधा!
हमारे लिए स्पेस सेक्टर यानी, entrepreneurs के लिए शिपमेंट से लेकर डिलीवरी तक बेहतर स्पीड: PM @narendramodi
आत्मनिर्भर भारत अभियान सिर्फ एक विजन नहीं है बल्कि एक well-thought, well-planned, Integrated Economic Strategy भी है।
— PMO India (@PMOIndia) October 11, 2021
एक ऐसी strategy जो भारत के उद्यमियों, भारत के युवाओं के Skill की क्षमताओं को बढ़ाकर, भारत को Global manufacturing powerhouse बनाए: PM @narendramodi
एक ऐसी strategy जो भारत के टेक्नोलॉजीकल एक्सपर्टीज को आधार बनाकर, भारत को innovations का Global center बनाए।
— PMO India (@PMOIndia) October 11, 2021
एक ऐसी strategy, जो global development में बड़ी भूमिका निभाए, भारत के human resources और talent की प्रतिष्ठा, विश्व स्तर पर बढ़ाए: PM @narendramodi
Public Sector Enterprises को लेकर सरकार एक स्पष्ट नीति के साथ आगे बढ़ रही है और जहां सरकार की आवश्यकता नहीं है, ऐसे ज्यादातर सेक्टर्स को private enterprises के लिए Open कर रही है।
— PMO India (@PMOIndia) October 11, 2021
अभी एयर इंडिया से जुड़ा जो फैसला लिया गया है वो हमारी प्रतिबद्धता और गंभीरता को दिखाता है: PM
हमने देखा है कि 20वीं सदी में Space और Space पर राज करने की प्रवृत्ति ने दुनिया के देशों को किस तरह विभाजित किया।
— PMO India (@PMOIndia) October 11, 2021
अब 21वीं सदी में Space, दुनिया को जोड़ने में, Unite करने में अहम भूमिका निभाए, ये भारत को सुनिश्चित करना होगा: PM @narendramodi