Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತೀಯ ವಾಯು ಪಡೆಯ ಮಾರ್ಷಲ್ ಅರ್ಜುನ್ ಸಿಂಗ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಪ್ರಧಾನಮಂತ್ರಿ;ಶೀಘ್ರ ಗುಣಮುಖರಾಗುವಂತೆ ಶುಭ ಕೋರಿಕೆ


ತೀವ್ರ ಅನಾರೋಗ್ಯಪೀಡಿತರಾಗಿರುವ ಭಾರತೀಯ ವಾಯು ಪಡೆಯ ಮಾರ್ಷಲ್ ಅರ್ಜುನ್ ಸಿಂಗ್ ಅವರನ್ನು ಕಾಣಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರ್.ಆರ್. ಆಸ್ಪತ್ರೆಗೆ ಭೇಟಿ ನೀಡಿದ್ದರು. ಅವರ ಕುಟುಂಬದ ಸದಸ್ಯರನ್ನೂ ಭೇಟಿ ಮಾಡಿದ ಅವರು, ಶೀಘ್ರ ಗುಣಮುಖರಾಗುವಂತೆ ಶುಭಕೋರಿದರು.

“ತೀವ್ರ ಅನಾರೋಗ್ಯ ಪೀಡಿತರಾಗಿರುವಭಾರತೀಯ ವಾಯುಪಡೆಯ ಮಾರ್ಷಲ್ ಅರ್ಜುನ್ ಸಿಂಗ್ ಅವರನ್ನು ಕಾಣಲು ಆರ್.ಆರ್. ಆಸ್ಪತ್ರೆಗೆ ಹೋಗಿದ್ದೆ. ನಾನು ಅವರ ಕುಟುಂಬದ ಸದಸ್ಯರನ್ನೂ ಭೇಟಿ ಮಾಡಿದ್ದೆ.

ಭಾರತೀಯ ವಾಯು ಪಡೆಯ ಮಾರ್ಷಲ್ ಅವರು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥಿಸುತ್ತಿದ್ದೇವೆ. ವೈದ್ಯರು ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ.”, ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

AKT/NT