Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ವರ್ಷ ತುಂಬಿದ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವಿನ ರಾಜತಾಂತ್ರಿಕ ಬಾಂಧವ್ಯವನ್ನು ಸ್ಥಾಪಿಸಿ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ಯೂನ್ ಸುಕ್ ಯೆಯೋಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಪರಸ್ಪರ ಗೌರವ, ಹಂಚಿಕೆಯ ಮೌಲ್ಯಗಳು ಮತ್ತು ಬೆಳೆಯುತ್ತಿರುವ ಪಾಲುದಾರಿಕೆಗಳ ಸಯೋಗದ ಪ್ರಯಾಣವನ್ನು ಒತ್ತಿಹೇಳುತ್ತಾ, ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಆಳಗೊಳಿಸಲು ಮತ್ತು ವಿಸ್ತರಿಸಲು ಶ್ರೀ ಯೂನ್ ಸುಕ್ ಯೋಲ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಅವಕಾಶವನ್ನು ಪ್ರಧಾನಮಂತ್ರಿಯವರು ಎದುರು ನೋಡುತ್ತಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ; 

“ನಾವು ಇಂದು ಭಾರತ ಮತ್ತು ಕೊರಿಯಾ ಗಣರಾಜ್ಯದ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿ 50 ವರ್ಷಗಳನ್ನು ಆಚರಿಸುತ್ತಿದ್ದೇವೆ. ಇದು ಪರಸ್ಪರ ಗೌರವ, ಹಂಚಿಕೆಯ ಮೌಲ್ಯಗಳು ಮತ್ತು ಬೆಳೆಯುತ್ತಿರುವ ಪಾಲುದಾರಿಕೆಯ ಸಹಯೋಗದ ಪ್ರಯಾಣವಾಗಿದೆ. ನಾನು ಕೊರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ಯೂನ್ ಸುಕ್ ಯೋಲ್ ಅವರಿಗೆ ಶುಭ ಹಾರೈಸುತ್ತೇನೆ ಮತ್ತು ನಮ್ಮ ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಆಳಗೊಳಿಸಲು ಮತ್ತು ವಿಸ್ತರಿಸಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಅವಕಾಶಗಳನ್ನು ಎದುರು ನೋಡುತ್ತಿದ್ದೇನೆ.