Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಗ್ರಾಮೀಣ ಜನರ ಸಬಲೀಕರಣಕ್ಕಾಗಿ ಶ್ರೀ ದೇಶಮುಖ್ ಅವರ ಸಮರ್ಪಣೆ ಮತ್ತು ಸೇವೆಯನ್ನು ಶ್ರೀ ಮೋದಿ ಸ್ಮರಿಸುತ್ತಾ ಶ್ಲಾಘಿಸಿದ್ದಾರೆ.

Xನ ಪೋಸ್ಟ್ ನಲ್ಲಿ, ಅವರು:

“ದೇಶವಾಸಿಗಳ ಪರವಾಗಿ, ಭಾರತ ರತ್ನ ನಾನಾಜಿ ದೇಶಮುಖ್ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ವಿನಮ್ರ ಗೌರವ ಸಲ್ಲಿಸುತ್ತೇನೆ. ದೇಶದ ಗ್ರಾಮೀಣ ಭಾಗದ ಜನರ, ವಿಶೇಷವಾಗಿ ಶೋಷಿತ ಸಮುದಾಯದ ಸಬಲೀಕರಣಕ್ಕಾಗಿ ಅವರ ಸಮರ್ಪಣೆ ಮತ್ತು ಸೇವೆಯನ್ನು ಯಾವಾಗಲೂ ಸ್ಮರಿಸಲಾಗುತ್ತದೆ” ಎಂದು ಹೇಳಿದ್ದಾರೆ.

 

 

*****