ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳವಾರ ಭಾರತ ಸರ್ಕಾರದ ಉನ್ನತ ವೈಜ್ಞಾನಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇವರಲ್ಲಿ ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಸಾರಸ್ವತ್; ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಡಾ. ಆರ್. ಚಿದಂಬರಂ; ಮತ್ತು ಕೇಂದ್ರ ಸರ್ಕಾರದ ವೈಜ್ಞಾನಿಕ ಇಲಾಖೆಗೆ ಸಂಬಂಧಿಸಿದ ಕಾರ್ಯದರ್ಶಿಗಳು ಸೇರಿದ್ದರು.
ಅಧಿಕಾರಿಗಳು ಪ್ರಧಾನಮಂತ್ರಿಯವರಿಗೆ ವೈಜ್ಞಾನಿಕ ಸಂಶೋಧನೆಯ ವಿವಿಧ ಕ್ಷೇತ್ರಗಳ ಪ್ರಗತಿಯ ಬಗ್ಗೆ ವಿವರಿಸಿದರು.
ಭಾರತದ ಪ್ರಗತಿ ಮತ್ತು ಸಮೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಹಾಗೂ ನಾವಿನ್ಯತೆ ಪ್ರಮುಖ ಅಂಶಗಳು ಎಂದು ಪ್ರಧಾನಿ ಪ್ರತಿಪಾದಿಸಿದರು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ವಿಜ್ಞಾನದ ಬಳಕೆ ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ತಿಳಿಸಿದರು.
ಕ್ರೀಡೆಯಲ್ಲಿ ಪ್ರತಿಭೆಗಳನ್ನು ಗುರುತಿಸುವ ಉದಾಹರಣೆಯನ್ನು ನೀಡಿದ ಪ್ರಧಾನಮಂತ್ರಿಯವರು, ಶಾಲಾ ಬಾಲಕರಲ್ಲಿ ಅತಿ ಉತ್ತಮ ವಿಜ್ಞಾನ ಪ್ರತಿಭೆಗಳನ್ನು ಗುರುತಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಬೇರು ಮಟ್ಟದಲ್ಲಿ ಸಾಕಷ್ಟು ನಾವಿನ್ಯತೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಕಂದಕಗಳನ್ನು ಭೇದಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಪ್ರಧಾನಮಂತ್ರಿಯವರು, ಬೇರು ಮಟ್ಟದಲ್ಲಿನ ಯಶಸ್ವೀ ನಾವಿನ್ಯತೆಯನ್ನು ಪುನರಾವರ್ತಿಸಲು ಮತ್ತು ಅದನ್ನು ದಾಖಲಿಸಲು ವ್ಯವಸ್ಥೆಯೊಂದನ್ನು ರೂಪಿಸುವ ಅಗತ್ಯವನ್ನು ಬಲವಾಗಿ ಪ್ರತಿಪಾದಿಸಿದರು. ಈ ನಿಟ್ಟಿನಲ್ಲಿ, ರಕ್ಷಣಾ ಸಿಬ್ಬಂದಿ ಮಾಡಿದ ನಾವಿನ್ಯತೆಗಳನ್ನು ಪ್ರಸ್ತಾಪಿಸಿದರು.
ಕೃಷಿ ವಲಯದಲ್ಲಿ ಹೆಚ್ಚಿನ ಪ್ರೊಟೀನ್ ಇರುವ ಕಾಳುಗಳು, ಬಲವರ್ಧಿತ ಆಹಾರಗಳು ಮತ್ತು ಸುಗಂಧಿತ ಪದಾರ್ಥಗಳಲ್ಲಿ ಮೌಲ್ಯವರ್ಧನೆಯನ್ನು ಗುರುತಿಸಿದ ಪ್ರಧಾನಿಯವರು ಇವು ಆದ್ಯತೆಯ ಕ್ಷೇತ್ರಗಳಾಗಿದ್ದು ಇದಕ್ಕೆ ಹೆಚ್ಚಿನ ವೇಗ ನೀಡಬೇಕು ಎಂದರು.
ಇಂಧನ ವಲಯದಲ್ಲಿ ಇಂಧನ ಆಮದು ಅವಲಂಬನೆ ಕಡಿಮೆ ಮಾಡಲು ಸೌರ ಶಕ್ತಿಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳುವ ಸಾಧ್ಯತೆಗಳಿಗೆ ಗಮನ ಹರಿಸಬೇಕು ಎಂದರು.
ಸವಾಲುಗಳಿಗೆ ಪುಟಿದೇಳುವ ಮತ್ತು ಭಾರತದ ಶ್ರೀಸಾಮಾನ್ಯನ ಬದುಕನ್ನು ಸುಧಾರಣೆ ಮಾಡಲು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭಾರತೀಯ ವಿಜ್ಞಾನಿಗಳ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಭಾರತ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ 2022ರ ಹೊತ್ತಿಗೆ ಸಾಧಿಸಬಹುದಾದ ಸ್ಪಷ್ಟ ಗುರಿಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
***
AKT/HS
Met top scientific officials of the Government of India & discussed various areas of scientific research. https://t.co/O1fI8PAESz
— Narendra Modi (@narendramodi) July 19, 2017
Deliberated on application of science in various sectors, including agriculture & energy, for the benefit of citizens.
— Narendra Modi (@narendramodi) July 19, 2017