Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಿಕ್ಕು ಸಂಘದ ಸದಸ್ಯರು ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ಪಾಲಿ ಮತ್ತು ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು

ಭಿಕ್ಕು ಸಂಘದ ಸದಸ್ಯರು ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ಪಾಲಿ ಮತ್ತು ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು


ಮುಂಬೈನ ಭಿಕ್ಕು ಸಂಘದ ಸದಸ್ಯರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಪಾಲಿ ಮತ್ತು ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಿದ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Xನ ಪೋಸ್ಟ್ ನಲ್ಲಿ:

“ಮುಂಬೈನ ಭಿಕ್ಕು ಸಂಘದ ಸದಸ್ಯರು ನನ್ನನ್ನು ಭೇಟಿಯಾಗಿ ಪಾಲಿ ಮತ್ತು ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಿದ ಕ್ಯಾಬಿನೆಟ್ ನಿರ್ಧಾರದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಬೌದ್ಧ ಧರ್ಮದೊಂದಿಗೆ ಪಾಲಿ ಭಾಷೆಯ ಬಲವಾದ ಸಂಪರ್ಕವನ್ನು ನೆನಪಿಸಿಕೊಂಡು ಮುಂಬರುವ ದಿನಗಳಲ್ಲಿ ಹೆಚ್ಚಿನ ಯುವಕರು ಪಾಲಿ ಭಾಷೆಯನ್ನು ಕಲಿಯುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು” ಎಂದು ಬರೆದಿದ್ದಾರೆ.

 

 

*****