Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ವಿಜ್ಞಾನಿಗಳು ಮತ್ತು ಇಂಜಿನಿಯರ್ ಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಕ್ಕಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಗುಜರಾತಿನ ಮೊದಲ ಅತಿ ದೊಡ್ಡ ಸ್ವದೇಶಿ 700 ಎಂ.ಡಬ್ಲ್ಯೂ.ಇ “ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ” ಇದರ ಘಟಕ-3 ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ತಮ್ಮ ಎಕ್ಸ್ ಖಾತೆಯಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

“ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಗುಜರಾತಿನ ಮೊದಲ ಅತಿ ದೊಡ್ಡ ಸ್ವದೇಶಿ 700 ಎಂ.ಡಬ್ಲ್ಯೂ.ಇ “ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ” ಇದರ ಘಟಕ-3 ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು.”

 

***