Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.
 
ಈ ಕುರಿತು ಪ್ರಧಾನಿ ಕಾರ್ಯಾಲಯ ಹೀಗೆ ಟ್ವೀಟ್‌ ಮಾಡಿದೆ: 

“ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರ ಶೀಘ್ರ  ಚೇತರಿಕೆಗೆ ಹಾರೈಸುವೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ

Pained by the loss of lives due to an accident in Betul, MP. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. Rs. 50,000 would be given to the injured: PM @narendramodi

— PMO India (@PMOIndia) November 4, 2022

*****