ಇಂದು ಮಹಾತ್ಮ ಫುಲೆ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಮಹಾತ್ಮ ಫುಲೆ ಅವರು ಮಾನವೀಯತೆಯ ನಿಜವಾದ ಸೇವಕ ಎಂದು ಶ್ಲಾಘಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು,
“ಮಾನವಕುಲದ ನಿಜವಾದ ಸೇವಕ ಮಹಾತ್ಮ ಫುಲೆ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಅವರು ಸಮಾಜದ ತುಳಿತಕ್ಕೊಳಗಾದ ಮತ್ತು ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ದೇಶಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆ ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ.” ಎಂದು ಹೇಳಿದ್ದಾರೆ.
*****
मानवता के सच्चे सेवक महात्मा फुले को उनकी जयंती पर सादर नमन। उन्होंने समाज के शोषित और वंचित वर्गों के कल्याण के लिए अपना जीवन समर्पित कर दिया। देश के लिए उनका अमूल्य योगदान हर पीढ़ी को प्रेरित करता रहेगा। pic.twitter.com/ENHDuU5bSq
— Narendra Modi (@narendramodi) April 11, 2025