Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವರಿಗೆ ಇಂದು ಗೌರವ ನಮನ ಸಲ್ಲಿಸಿದರು. ಸಮಾನತೆ ಮತ್ತು ಮಾನವ ಘನತೆಗಾಗಿ ಡಾ. ಅಂಬೇಡ್ಕರ್ ಅವರ ಅವಿರತ ಹೋರಾಟವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಮಹಾಪರಿನಿರ್ವಾಣ ದಿನದಂದು ನಮ್ಮ ಸಂವಿಧಾನ ಶಿಲ್ಪಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನಾನು ಶಿರಸಾ ನಮಿಸುತ್ತೇನೆ.

ಸಮಾನತೆ ಮತ್ತು ಮಾನವ ಘನತೆ ಕಾಪಾಡಲು ಡಾ. ಅಂಬೇಡ್ಕರ್ ಅವರ ಅವಿರತ ಹೋರಾಟವು ಭವಿಷ್ಯದ ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ. ಅವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ನಮ್ಮ ಬದ್ಧತೆಯನ್ನು ಇಂದು ನಾವು ಪುನರುಚ್ಚರಿಸುತ್ತೇವೆ.

ಈ ವರ್ಷದ ಆರಂಭದಲ್ಲಿ ನಾನು ಮುಂಬೈನ ಚೈತ್ಯ ಭೂಮಿಗೆ ಭೇಟಿ ನೀಡಿದ ಚಿತ್ರವನ್ನು ಸಹ ಹಂಚಿಕೊಳ್ಳುತ್ತಿದ್ದೇನೆ.

ಜೈ ಭೀಮ್!”

 

 

*****