Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ಮನೋಹರ ಜೋಶಿಯವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ಮನೋಹರ್ ಜೋಶಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಶ್ರೀ ಜೋಶಿ ಅವರು 2002 ರಿಂದ 2004 ರವರೆಗೆ ಲೋಕಸಭಾ ಸ್ಪೀಕರ್ ಆಗಿದ್ದರು. ಮಹಾರಾಷ್ಟ್ರ ಸಿಎಂ ಆಗಿ ಶ್ರೀ ಮನೋಹರ್ ಜೋಶಿ ಅವರು ರಾಜ್ಯದ ಪ್ರಗತಿಗೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಲೋಕಸಭೆಯ ಸ್ಪೀಕರ್ ಆಗಿದ್ದ ಅವಧಿಯಲ್ಲಿ, ಶ್ರೀ ಜೋಶಿಯವರು ನಮ್ಮ ಸಂಸದೀಯ ಪ್ರಕ್ರಿಯೆಗಳನ್ನು ಹೆಚ್ಚು ರೋಮಾಂಚಕ ಮತ್ತು ಪಾಲ್ಗೊಳ್ಳುವಿಕೆಯಿಂದ ಮಾಡಲು ಶ್ರಮಿಸಿದರು ಎಂದು ಪ್ರಧಾನಮಂತ್ರಿ ಹೇಳಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

“ಶ್ರೀ ಮನೋಹರ ಜೋಶಿಯವರ ನಿಧನದಿಂದ ನೋವಾಗಿದೆ. ಹಲವು ವರ್ಷಗಳ ಕಾಲ ಸಾರ್ವಜನಿಕ ಸೇವೆ ನೀಡಿದ್ದರು. ಪುರಸಭೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಪ್ರಗತಿಗೆ ಅವಿರತವಾಗಿ ಶ್ರಮಿಸಿದ್ದಾರೆ. ಕೇಂದ್ರ ಸಚಿವರಾಗಿಯೂ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ. ಲೋಕಸಭೆಯ ಸ್ಪೀಕರ್ ಆಗಿದ್ದ ಅವಧಿಯಲ್ಲಿ ಅವರು ನಮ್ಮ ಸಂಸತ್ತಿನ ಪ್ರಕ್ರಿಯೆಗಳನ್ನು ಸೂಕ್ತವಾಗಿ ನಡೆಯುವಂತೆ ಶ್ರಮಿಸಿದರು. ಮನೋಹರ ಜೋಶಿ ಜೀ ಅವರು ಶಾಸಕರಾಗಿ ತಮ್ಮ ಪರಿಶ್ರಮದಿಂದ ಸ್ಮರಣೀಯರಾಗುತ್ತಾರೆ, ನಾಲ್ಕು ವಿಧಾನಸಭೆಗಳಲ್ಲಿ ಸೇವೆ ಸಲ್ಲಿಸಿದ ಗೌರವವನ್ನು ಹೊಂದಿದ್ದಾರೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ. ಓಂ ಶಾಂತಿ!

***