Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರದ ಸಿಂಧುದುರ್ಗ್ ನಲ್ಲಿರುವ ರಾಜ್ ಕೋಟ್ ಫೋರ್ಟ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರಧಾನಮಂತ್ರಿಗಳಿಂದ ಅನಾವರಣ

ಮಹಾರಾಷ್ಟ್ರದ ಸಿಂಧುದುರ್ಗ್ ನಲ್ಲಿರುವ ರಾಜ್ ಕೋಟ್ ಫೋರ್ಟ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರಧಾನಮಂತ್ರಿಗಳಿಂದ ಅನಾವರಣ


ಮಹಾರಾಷ್ಟ್ರ ರಾಜ್ಯದ ಸಿಂಧುದುರ್ಗ್ ನ ರಾಜ್ ಕೋಟ್ ಫೋರ್ಟ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಅನಾವರಣಗೊಳಿಸಿದರು. ಶ್ರೀ ಮೋದಿ ಅವರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ಛಾಯಾಚಿತ್ರಗಳ ಗ್ಯಾಲರಿ ವೀಕ್ಷಿಸಿದರು.

ಈ ಬಗ್ಗೆ ಟ್ವಿಟರ್ (ಎಕ್ಸ್ ) ನಲ್ಲಿ ಪೋಸ್ಟ್ ಮಾಡಿರುವ ಅವರು,

“ಇಂದು ಸಂಜೆ (2023ರ ಡಿಸೆಂಬರ್ 4), ರಾಜ್ ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆ ಅನಾವರಣ ಮಾಡಿದೆ” ಎಂದಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಶ್ರೀ ರಮೇಶ್ ಬಾಯಿಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಶ್ರೀ ನಾರಾಯಣ್ ರಾಣೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಶ್ರೀ ಅಜಿತ್ ಪವಾರ್, ನೌಕಾಪಡೆ ಮುಖ್ಯಸ್ಥರಾದ ಅಡ್ಮಿರಲ್ ಆರ್. ಹರಿಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

***