Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಕೇಂದ್ರ ಸಚಿವ ಶ್ರೀ ಶರದ್ ಯಾದವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಕೇಂದ್ರ ಸಚಿವ ಶ್ರೀ ಶರದ್ ಯಾದವ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಡಾ.ಲೋಹಿಯಾ ಅವರ ಆದರ್ಶಗಳಿಂದ ಬಹಳ ಪ್ರಭಾವಿತರಾಗಿದ್ದರು ಎಂದೂ  ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು ಅದರಲ್ಲಿ;

“ಶ್ರೀ ಶರದ್ ಯಾದವ್ ಜೀ ಅವರ ನಿಧನದಿಂದ ನೋವಾಗಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ, ಅವರು ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡವರು. ಡಾ. ಲೋಹಿಯಾ ಅವರ ಆದರ್ಶಗಳಿಂದ ಅವರು ಬಹಳ ಪ್ರೇರೇಪಿತರಾಗಿದ್ದರು. ನಮ್ಮ ನಡುವಿನ ಸಂವಾದಗಳನ್ನು ನಾನು ಸದಾ ಸ್ಮರಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.” 

***