Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಶಾಸಕ ಶ್ರೀ ಉರಿಮಜಲು ಕೆ. ರಾಮ ಭಟ್ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಶಾಸಕ ಶ್ರೀ ಉರಿಮಜಲು ಕೆ.ರಾಮಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನವಿದೆ. ಅವರು ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಬಲವರ್ಧನೆಗೊಳಿಸಲು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು   ಮತ್ತು ಜನರ ನಡುವೆ ಅವಿರತವಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬಕ್ಕೆ ಸಂತಾಪಗಳು. ಓಂ ಶಾಂತಿ’’ ಎಂದು ಹೇಳಿದ್ದಾರೆ.

***