Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾರ್ಚ್ 6 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 6ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:30 ರ ಸುಮಾರಿಗೆ ಅವರು ಮುಖ್ವಾದ ಗಂಗಾ ಮಾತೆಯ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ಬೆಳಗ್ಗೆ 10:40 ಕ್ಕೆ ಅವರು ಚಾರಣ ಮತ್ತು ಬೈಕ್ ಜಾಥಾಗೆ ಚಾಲನೆ ನೀಡಲಿದ್ದಾರೆ ಮತ್ತು ಹರ್ಸಿಲ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಉತ್ತರಾಖಂಡ ಸರ್ಕಾರವು ಈ ವರ್ಷ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರೀನಾಥದ ಚಳಿಗಾಲದ ಆಸನಗಳಿಗೆ ಸಾವಿರಾರು ಭಕ್ತರು ಈಗಾಗಲೇ ಭೇಟಿ ನೀಡಿದ್ದಾರೆ. ಈ ಕಾರ್ಯಕ್ರಮವು ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಸ್ಥಳೀಯ ಆರ್ಥಿಕತೆ, ಹೋಮ್ ಸ್ಟೇಗಳು, ಪ್ರವಾಸೋದ್ಯಮ ವ್ಯವಹಾರಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

 

*****