Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಮಿಜೋರಂ ಚುನಾವಣೆ: ಶ್ರೀ ಲಾಲ್ದುಹೋಮ ಮತ್ತು ಅವರ ಪಕ್ಷ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಗೆ ಪ್ರಧಾನಿ ಮೋದಿ ಅಭಿನಂದನೆ


ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಶ್ರೀ ಲಾಲ್ದುಹೋಮ ಮತ್ತು ಅವರ ಪಕ್ಷ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮಿಜೋರಾಂ ಪ್ರಗತಿಯನ್ನು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನೂ ನೀಡುವುದಾಗಿ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಆಶ್ವಾಸನೆ ನೀಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಮತ್ತು ಅದರ ಮುಖ್ಯಸ್ಥ ಶ್ರೀ ಲಾಲ್ದುಹೋಮ ಅವರಿಗೆ ಅಭಿನಂದನೆಗಳು. ಮಿಜೋರಾಂ ಪ್ರಗತಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ನೀಡುತ್ತೇವೆ” ಎಂದು ಬರೆದುಕೊಂಡಿದ್ದಾರೆ.

***