ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತದಿಂದಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಲಾಗಿದೆ.
ಪ್ರಧಾನಿ ಕಚೇರಿ ಟ್ವೀಟ್ ಮಾಡಿದ್ದು ಹೀಗೆ;
ಮಿಜೋರಾಂನ ಕಲ್ಲು ಕ್ವಾರಿ ಕುಸಿತ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳನ್ನು ಸೂಚಿಸುತ್ತಾ, ಪ್ರಧಾನ ಮಂತ್ರಿಗಳು ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ . ಧನಸಹಾಯ (ಎಕ್ಸ್-ಗ್ರೇಷಿಯಾ) ನೀಡಲಾಗುವುದಾಗಿಯೂ ಹಾಗೂ ಗಾಯಾಳುಗಳಿಗೆ ರೂ. 50,000/- ಘೋಷಿಸಿದ್ದಾರೆ.
***
My thoughts are with those who lost their loved ones due to the tragic stone quarry collapse in Mizoram. An ex-gratia of Rs. 2 lakh would be given from PMNRF to the next of kin of each deceased. The injured would be given Rs. 50,000: PM @narendramodi
— PMO India (@PMOIndia) November 16, 2022