Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಮೊದಲ ಖೇಲೋ ಇಂಡಿಯಾ ಪ್ಯಾರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಎಲ್ಲಾ ಅಥ್ಲೀಟ್ ಗಳಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೊದಲ ಖೇಲೋ ಇಂಡಿಯಾ ಪ್ಯಾರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಎಲ್ಲಾ ಅಥ್ಲೀಟ್ ಗಳಿಗೆ ಶುಭ ಕೋರಿದ್ದಾರೆ. 

ದೆಹಲಿಯಲ್ಲಿ ಮೊದಲ ಖೇಲೋ ಇಂಡಿಯಾ ಪ್ಯಾರಾ ಕ್ರೀಡಾಕೂಟ ಆರಂಭವಾಗುತ್ತಿರುವ ಬಗ್ಗೆ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ ನೀಡಿರುವ ಮಾಹಿತಿಯ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಬರೆದಿದ್ದಾರೆ;

“ಮೊದಲ ಖೇಲೋ ಇಂಡಿಯಾ ಪ್ಯಾರಾ ಕ್ರೀಡಾಕೂಟ ಆರಂಭವಾಗುತ್ತಿದೆ, ಅದರಲ್ಲಿ ಭಾಗವಹಿಸುತ್ತಿರುವ ಎಲ್ಲಾ ಅಥ್ಲೀಟ್ ಗಳಿಗೆ ಶುಭಾಶಯಗಳು. ಇದು ಎಲ್ಲರನ್ನೂ ಒಳಗೊಳ್ಳುವ ಮತ್ತು ಸಬಲೀಕರಣ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ’’

***