Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮ್ಯಾನ್ಮಾರ್ ನ ಮಿಲಿಟರಿ ಸರ್ಕಾರದ  ಮುಖ್ಯಸ್ಥ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ 

ಮ್ಯಾನ್ಮಾರ್ ನ ಮಿಲಿಟರಿ ಸರ್ಕಾರದ  ಮುಖ್ಯಸ್ಥ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ 


ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಇಂದು ನಡೆದ ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮ್ಯಾನ್ಮಾರ್‌ ನ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನ ಮಂತ್ರಿಗಳು, ಈ ಕಠಿಣ ಸಮಯದಲ್ಲಿ ಮ್ಯಾನ್ಮಾರ್‌ನ ಸಹೋದರ ಸಹೋದರಿಯರಿಗೆ ಭಾರತದ ಸಹಾಯದ ಭರವಸೆ ನೀಡಿದರು. ಇಬ್ಬರೂ ನಾಯಕರು ಭಾರತ ಮತ್ತು ಮ್ಯಾನ್ಮಾರ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು, ವಿಶೇಷವಾಗಿ ಸಂಪರ್ಕ, ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಇತರ ಕ್ಷೇತ್ರಗಳ ಬಗ್ಗೆ ಚರ್ಚಿಸಿದರು.

ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: 

“ಬ್ಯಾಂಕಾಕ್‌ನಲ್ಲಿ ನಡೆದ ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಮ್ಯಾನ್ಮಾರ್‌ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿಯಾದೆ. ಇತ್ತೀಚೆಗೆ ಭೂಕಂಪದಲ್ಲಿ ಉಂಟಾದ ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿಗೆ ಸಂತಾಪ ಸೂಚಿಸಿದೆ. ಈ ಕಷ್ಟದ ಸಮಯದಲ್ಲಿ ಮ್ಯಾನ್ಮಾರ್‌ನ ನಮ್ಮ ಸಹೋದರ ಸಹೋದರಿಯರ ನೆರವಿಗೆ ಭಾರತ ಎಲ್ಲಾ ರೀತಿಯಲ್ಲಿಯೂ ನಿಂತಿದೆ. 

ನಾವು ಭಾರತ ಮತ್ತು ಮ್ಯಾನ್ಮಾರ್ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ ಸಂಪರ್ಕ, ಸಾಮರ್ಥ್ಯ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಇತರ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಗ್ಗೆ ಚರ್ಚಿಸಿದ್ದೇವೆ.”

 

 

*****