Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುಎಇಯ ಅಬುಧಾಬಿಗೆ ಆಗಮಿಸಿದ ಪ್ರಧಾನಿ ಮೋದಿ

ಯುಎಇಯ ಅಬುಧಾಬಿಗೆ ಆಗಮಿಸಿದ ಪ್ರಧಾನಿ ಮೋದಿ


 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜುಲೈ 15, 2023ರಂದು ಬೆಳಗ್ಗೆ ಯುನೈಟೆಡ್ ಅರಬ್ ಎಮಿರೇಟ್ಸ್-ಯುಎಇ ದೇಶದ ರಾಜಧಾನಿ ಅಬುಧಾಬಿಗೆ ಆಗಮಿಸಿದರು.

ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜಕುಮಾರ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ಮೋದಿಯವರಿಗೆ ವಿದ್ಯುಕ್ತ ಸರ್ಕಾರಿ ಸ್ವಾಗತ ಮತ್ತು ಗೌರವವನ್ನು ನೀಡಲಾಯಿತು.

****