Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುಕೆ (ಬ್ರಿಟನ್) ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಿಷಿ ಸುನಕ್ ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಷಿ ಸುನಕ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಯುಕೆ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,

” ಇಂದು @RishiSunak ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ (ಬ್ರಿಟನ್) ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದೆ. ನಮ್ಮ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಗ್ರ ಮತ್ತು ಸಮತೋಲಿತ ಎಫ್ ಟಿಎಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವ ಪ್ರಾಮುಖ್ಯದ ಬಗ್ಗೆಯೂ ನಾವು ಸಮ್ಮತಿಸಿದ್ದೇವೆ,” ಎಂದು ಅವರು ಹೇಳಿದ್ದಾರೆ.

***