Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಶಾಂತಿನಿಕೇತನ ಸೇರ್ಪಡೆಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಶಾಂತಿನಿಕೇತನವು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯ ಭಾಗವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“ಶ್ರೀ ಗುರುದೇವ್ ರವೀಂದ್ರನಾಥ ಠಾಗೂರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರದ ಸಂಕೇತವಾಗಿರುವ ಶಾಂತಿನಿಕೇತನವನ್ನು @ಯುನೆಸ್ಕೋ ( @UNESCO ) ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ.”

 

***