Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುನೈಟೆಡ್ ಕಿಂಗ್‌ಡಂ ಪ್ರಧಾನಿಯವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

ಯುನೈಟೆಡ್ ಕಿಂಗ್‌ಡಂ ಪ್ರಧಾನಿಯವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ


 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21 ಮೇ 2023 ರಂದು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಕಿಂಗ್‌ಡಮ್‌ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ರಿಷಿ ಸುನಕ್ ಅವರನ್ನು ಭೇಟಿಯಾದರು.

ಉಭಯ ನಾಯಕರು ಭಾರತ-ಯುಕೆ ಎಫ್‌ಟಿಎ ಮಾತುಕತೆಗಳ ಪ್ರಗತಿ ಸೇರಿದಂತೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸಿದರು.

ವ್ಯಾಪಾರ ಮತ್ತು ಹೂಡಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಮತ್ತು ಜನರೊಂದಿಗೆ ಜನರ ಸಂಬಂಧದಂತಹ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಗಾಢವಾಗಿಸಲು ಉಭಯ ನಾಯಕರು ಒಪ್ಪಿಕೊಂಡರು.

ಭಾರತದ ಜಿ-20 ಅಧ್ಯಕ್ಷತೆಯ ಬಗ್ಗೆಯೂ ಚರ್ಚೆಗಳು ನಡೆದವು. ಜಿ-20 ಶೃಂಗಸಭೆಗಾಗಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಸುನಕ್ ಅವರನ್ನು ಸ್ವಾಗತಿಸಲು ಪ್ರಧಾನಿಯವರು ಎದುರು ನೋಡುತ್ತಿದ್ದಾರೆ

*******.