Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುವ ಸಂಗಮದ ಉತ್ಸಾಹಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘನೆ 


ಅಸ್ಸಾಂ ರಾಜ್ಯದ ವಿದ್ಯಾರ್ಥಿಗಳ ತಂಡ ಯುವ ಸಂಗಮ್ ಗುಜರಾತ್‌ನ ಆನಂದ್‌ನಲ್ಲಿರುವ ಅಮುಲ್ ಸಹಕಾರಿ ಡೈರಿ ಘಟಕಕ್ಕೆ ಭೇಟಿ ನೀಡಿರುವ ಉತ್ಸಾಹವನ್ನು ಕಂಡು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಅಸ್ಸಾಂನ ತೇಜ್ ಪುರದ ಸಂಸದ ಪಲ್ಲಬ್ ಲೋಚನ್ ದಾಸ್ ಅವರು ಈ ಕುರಿತು ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಗಳು,

“ಇಂತಹ ಅವಕಾಶಗಳು ನಮ್ಮ ಯುವಜನತೆಗೆ ವೈವಿಧ್ಯಮಯ ಸಂಸ್ಕೃತಿಗಳನ್ನು ಅನ್ವೇಷಿಸಲು ಮತ್ತು ಭಾರತದ ವಿವಿಧ ಅಂಶಗಳನ್ನು ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ.” ಎಂದು ಬರೆದುಕೊಂಡಿದ್ದಾರೆ.

*****