ಯು.ಎ.ಇ.ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಬುಧಾಬಿಯ ಆಡಳಿತಗಾರ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
“ಯು.ಎ.ಇ.ಯ ಹೊಸ ಅಧ್ಯಕ್ಷರಾಗಿ ಆಯ್ಕೆಯಾದ ಅಬುಧಾಬಿಯ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ನನ್ನ ಶುಭಾಶಯಗಳು. ಅವರ ಕ್ರಿಯಾತ್ಮಕ ಆಡಳಿತ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ, ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಾಂಧವ್ಯ ಇನ್ನೂ ಆಳವಾಗಿ ಮುಂದುವರಿಯುತ್ತದೆ ಎಂಬ ವಿಶ್ವಾಸ ನನಗಿದೆ. @MohamedBinZayed “
***
My best wishes to the Ruler of Abu Dhabi H.H. Sheikh Mohamed bin Zayed Al Nahyan on being elected as the new President of the UAE. I am confident that under his dynamic and visionary leadership, our Comprehensive Strategic Partnership will continue to deepen. @MohamedBinZayed
— Narendra Modi (@narendramodi) May 14, 2022