Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯು.ಕೆ. ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಿ ದೂರವಾಣಿ ಸಂಭಾಷಣೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಯು.ಕೆ. ಪ್ರಧಾನಮಂತ್ರಿ ಥೆರೆಸಾ ಮೇ ಅವರೊಂದಿಗೆ ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ತಮ್ಮ ಹೊಸ ಜವಾಬ್ದಾರಿ ವಹಿಸಿಕೊಂಡ ಮೇ ಅವರಿಗೆ ಪ್ರಧಾನಮಂತ್ರಿಯವರು ಅಭಿನಂದನೆ ಸಲ್ಲಿಸಿದರು. ಪ್ರಧಾನಮಂತ್ರಿಯವರು, ಕಳೆದ ನವೆಂಬರ್ ನಲ್ಲಿ ತಾವು ಯು.ಕೆ.ಗೆ ನೀಡಿದ್ದ ಅವಿಸ್ಮರಣೀಯ ಭೇಟಿಯನ್ನು ಸ್ಮರಿಸಿದರು ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾರ್ಯತಂತ್ರಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. ವಿವಿಧ ಜಾಗತಿಕ ವೇದಿಕೆಗಳಲ್ಲಿ ಯುಕೆ ಭಾರತಕ್ಕೆ ನಿರಂತರವಾಗಿ ನೀಡುತ್ತಿರುವ ಬೆಂಬಲಕ್ಕೆ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಮೇ ಅವರು ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ಬಲವಾದ ದ್ವಿಪಕ್ಷೀಯ ಬಾಂಧವ್ಯ ಅಭಿವೃದ್ಧಿಗೆ ಮತ್ತು ಜಾಗತಿಕ ಸವಾಲುಗಳನ್ನು ಎದುರಿಸಲು ಸಹಕಾರ ವರ್ಧನೆಗೆ ತಾವು ಪ್ರಧಾನಮಂತ್ರಿಯವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದಿರು ನೋಡುತ್ತಿರುವುದಾಗಿ ಹೇಳಿದರು.