Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ಹೊರಡುವ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆ

ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ಹೊರಡುವ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆ


ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ಕಜಾನ್ ಗೆ ಎರಡು ದಿನಗಳ ಭೇಟಿಗಾಗಿ ಹೊರಡುತ್ತಿದ್ದೇನೆ.

ಜಾಗತಿಕ ಅಭಿವೃದ್ಧಿ ಕಾರ್ಯಸೂಚಿ, ಸುಧಾರಿತ ಬಹುಪಕ್ಷೀಯತೆ, ಹವಾಮಾನ ಬದಲಾವಣೆ, ಆರ್ಥಿಕ ಸಹಕಾರ, ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ನಿರ್ಮಿಸುವುದು, ಸಾಂಸ್ಕೃತಿಕ ಮತ್ತು ಜನರ ನಡುವಿನ ಸಂಪರ್ಕವನ್ನು ಉತ್ತೇಜಿಸುವುದು ಮುಂತಾದ ವಿಷಯಗಳ ಬಗ್ಗೆ ಸಂವಾದ ಮತ್ತು ಚರ್ಚೆಗೆ ಪ್ರಮುಖ ವೇದಿಕೆಯಾಗಿ ಹೊರಹೊಮ್ಮಿರುವ ಬ್ರಿಕ್ಸ್ ನೊಳಗಿನ ನಿಕಟ ಸಹಕಾರವನ್ನು ಭಾರತ ಗೌರವಿಸುತ್ತದೆ. ಕಳೆದ ವರ್ಷ ಹೊಸ ಸದಸ್ಯರ ಸೇರ್ಪಡೆಯೊಂದಿಗೆ ಬ್ರಿಕ್ಸ್ ನ ವಿಸ್ತರಣೆಯು ಜಾಗತಿಕ ಒಳಿತಿಗಾಗಿ ಅದರ ಒಳಗೊಳ್ಳುವಿಕೆ ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿದೆ.

2024ರ ಜುಲೈನಲ್ಲಿ ಮಾಸ್ಕೋದಲ್ಲಿ ನಡೆದ ವಾರ್ಷಿಕ ಶೃಂಗಸಭೆಯ ಆಧಾರದ ಮೇಲೆ, ನನ್ನ ಕಜಾನ್ ಭೇಟಿಯು ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಮತ್ತು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ.

ಇದೇ ಸಂದರ್ಭದಲ್ಲಿ ಬ್ರಿಕ್ಸ್ ನ ಇತರ ನಾಯಕರನ್ನು ಭೇಟಿಯಾಗಲು ಸಹ ನಾನು ಎದುರು ನೋಡುತ್ತಿದ್ದೇನೆ.

 

*****