Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 08-10, 2024)


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8-10ರಂದು ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಲು ರಷ್ಯಾ ಒಕ್ಕೂಟದ ಅಧ್ಯಕ್ಷ ಗೌರವಾನ್ವಿತ ಶ್ರೀ ವ್ಲಾದಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಅವರು 2024ರ ಜುಲೈ 08-09 ರಂದು ಮಾಸ್ಕೋಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಉಭಯ ದೇಶಗಳ ನಡುವಿನ ಬಹುಮುಖಿ ಸಂಬಂಧಗಳ ಸಂಪೂರ್ಣ ಶ್ರೇಣಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಯ ಸಮಕಾಲೀನ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.

ಬಳಿಕ ಪ್ರಧಾನಮಂತ್ರಿ ಅವರು 2024ರ ಜುಲೈ 9-10ರ ಅವಧಿಯಲ್ಲಿ ಆಸ್ಟ್ರಿಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. 41 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಅವರು ಆಸ್ಟ್ರಿಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅಲೆಕ್ಸಾಂಡರ್ ವಾನ್ ಡೆರ್ ಬೆಲೆನ್ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಆಸ್ಟ್ರಿಯಾದ ಚಾನ್ಸಲರ್ ಗೌರವಾನ್ವಿತ ಶ್ರೀ ಕಾರ್ಲ್ ನೆಹಮ್ಮರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಧಾನಮಂತ್ರಿ ಮತ್ತು ಚಾನ್ಸಲರ್ ಅವರು ಭಾರತ ಮತ್ತು ಆಸ್ಟ್ರಿಯಾದ ವಾಣಿಜ್ಯ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರು ಮಾಸ್ಕೋ ಮತ್ತು ವಿಯೆನ್ನಾದಲ್ಲಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.

 

*****